Breaking News

SSLC ಪರೀಕ್ಷೆ ಟಾಪರ್ ಸನ್ಮಾನಿಸಿ, ಬಹುಮಾನ ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ!

Spread the love

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಪಡೆದ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತ ಹಾಗೂ ದ್ವಿತೀಯ ರ‍್ಯಾಂಕ್‌ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಸನ್ಮಾನಿಸಿದ್ದು, ಶುಭ ಹಾರೈಸಿದ್ದಾರೆ.

SSLC ಪರೀಕ್ಷೆ ಟಾಪರ್ ಸನ್ಮಾನಿಸಿ, ಬಹುಮಾನ ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ!

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಅಮೋಘ ಸಾಧನೆ ಮಾಡಿದ ಈ ವಿದ್ಯಾರ್ಥಿಗಳ ಮುಂದಿನ‌ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ನೀಡುತ್ತಿರುವುದಾಗಿ ತಿಳಿಸಿದ್ದಾರೆ.ಗ್ರಾಮೀಣ ಮಕ್ಕಳು ಇನ್ನಷ್ಟು ಶೈಕ್ಷಣಿಕ ಸಾಧನೆಗಳನ್ನು ಮಾಡುವಂತಾಗಲಿ, ಈ ಮಕ್ಕಳು ಓದಿದ ಶಾಲೆ ಮತ್ತಷ್ಟು ಸರ್ಕಾರಿ ಶಾಲೆಗಳಿಗೆ ಸ್ಪೂರ್ತಿಯಾಗಲಿ ಎಂದು ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ