ನಟಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು
ಮುಂಬಯಿ: ಬಿಗ್ ಬಾಸ್ ಖ್ಯಾತಿ, ನಟಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಅಭಿಮಾನಿಗಳ ಚಿಂತೆಗೆ ಕಾರಣವಾಗಿದೆ.
ಮಂಗಳವಾರ(ಮೇ.14 ರಂದು) ಅವರು ಮುಂಬಯಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

‘ಗಂಭೀರ ಹೃದಯ ಸಮಸ್ಯೆ’ಯಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದ್ದು, ಆಸ್ಪತ್ರೆ ಬೆಡ್ ಮೇಲೆ ಮಲಗಿರುವ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
“ಮುಂದಿನ 5-6 ದಿನಗಳ ಕಾಲ ವಿಶ್ರಾಂತಿ ಪಡೆಯಲು ನನಗೆ ಸೂಚಿಸಲಾಗಿದೆ. ಹೃದಯ ಸಂಬಂಧಿ ಸಮಸ್ಯೆಯಿದೆ. ಈ ಸಮಯದಲ್ಲಿ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ನನಗೆ ಸ್ವಲ್ಪ ಸಮಯಬೇಕಿದೆ” ಎಂದು ರಾಖಿ ವೆಬ್ ಪೋರ್ಟಲ್ ವೊಂದಕ್ಕೆ ಹೇಳಿದ್ದಾರೆ ಎಂದು ವರದಿ ಆಗಿದೆ.
Laxmi News 24×7