Breaking News

ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Spread the love

ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

ಮುಂಬಯಿ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಅಭಿಮಾನಿಗಳ ಚಿಂತೆಗೆ ಕಾರಣವಾಗಿದೆ.

ಮಂಗಳವಾರ(ಮೇ.14 ರಂದು) ಅವರು ಮುಂಬಯಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

‘ಗಂಭೀರ ಹೃದಯ ಸಮಸ್ಯೆ’ಯಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದ್ದು, ಆಸ್ಪತ್ರೆ ಬೆಡ್‌ ಮೇಲೆ ಮಲಗಿರುವ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

 

“ಮುಂದಿನ 5-6 ದಿನಗಳ ಕಾಲ ವಿಶ್ರಾಂತಿ ಪಡೆಯಲು ನನಗೆ ಸೂಚಿಸಲಾಗಿದೆ. ಹೃದಯ ಸಂಬಂಧಿ ಸಮಸ್ಯೆಯಿದೆ. ಈ ಸಮಯದಲ್ಲಿ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ನನಗೆ ಸ್ವಲ್ಪ ಸಮಯಬೇಕಿದೆ” ಎಂದು ರಾಖಿ ವೆಬ್‌ ಪೋರ್ಟಲ್ ವೊಂದಕ್ಕೆ ಹೇಳಿದ್ದಾರೆ ಎಂದು ವರದಿ ಆಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ