Breaking News

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಭೀಕರ ಹತ್ಯೆ!

Spread the love

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಿಂದ ಮನಬಂದಂತೆ ಇರಿದು ಹತ್ಯಗೈದ ಘಟನೆ ಇಲ್ಲಿನ ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿ ಬುಧವಾರ ಬೆಳಗಿನ ಜಾವ ಸಂಭವಿಸಿದೆ.

ವೀರಾಪುರ ಓಣಿಯ ಅಂಜಲಿ ಮೋಹನ ಅಂಬಿಗೇರ (21) ಕೊಲೆಯಾಗಿದ್ದು, ಯಲ್ಲಾಪುರ ಓಣಿಯ ಗಿರೀಶ (ವಿಶ್ವ) ಎಸ್.

ಸಾವಂತ ಎಂಬಾತ ಕೊಲೆ ಮಾಡಿದ್ದಾನೆ.

Hubli: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಭೀಕರ ಹತ್ಯೆ!

ಅಂಜಲಿಯು ಪ್ರೀತಿ ನಿರಾಕರಿಸಿದ್ದಕ್ಕೆ ಹುಚ್ಚು ಪ್ರೇಮಿಯಾದ ಗಿರೀಶ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮನೆಯ ಬಾಗಿಲು ಬಡೆದಿದ್ದಾನೆ. ಆಗ ಅಂಜಲಿಯೇ ಬಾಗಿಲು ತೆರೆದಾಗ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ ಎಂದು ಮೂಲಗಳು ತಿಳಿಸಿವೆ.

ಕೃತ್ಯ ಎಸಗಿದ ಗಿರೀಶ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆತನ ತಾಯಿ ಮನೆ ಮನೆಯ ಪಾತ್ರೆ ತೊಳೆಯುವ ಕೆಲಸ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

ಬೆಂಡಿಗೇರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಹಂತಕನ ಪತ್ತೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ