Breaking News

ರಾಜ್ಯ ಸರ್ಕಾರದ ಕೈ ಸೇರಿದ ಗುಪ್ತಚರ ವರದಿ; ಮೈತ್ರಿಗೆ ಶಾಕ್-‌ ಕಾಂಗ್ರೆಸ್‌ ಗೆಲ್ಲುವ ಸ್ಥಾನಗಳೆಷ್ಟು?

Spread the love

ರಾಜ್ಯ ಸರ್ಕಾರದ ಕೈ ಸೇರಿದ ಗುಪ್ತಚರ ವರದಿ; ಮೈತ್ರಿಗೆ ಶಾಕ್-‌ ಕಾಂಗ್ರೆಸ್‌ ಗೆಲ್ಲುವ ಸ್ಥಾನಗಳೆಷ್ಟು?

ಬೆಂಗಳೂರು, ಮೇ 16: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್‌ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಮೈತ್ರಿಯಾಗಿ ಲೋಕಸಭಾ ಚುನಾವಣೆಯನ್ನ ಎದುರಿಸಿದ್ದು, ಇದೀಗ ಸೋಲು ಗೆಲುವಿನ ಲೆಕ್ಕಾಚಾರದಲ್ಲಿದ್ದಾರೆ.

 

ಲೋಕಸಭಾ ಚುನಾವಣೆಯಲ್ಲಿ ಪ್ರತಿ ಬಾರಿಯೂ ಮೋದಿ ಅಲೆ ವರ್ಕ್‌ ಆಗುತ್ತೆ ಎನ್ನುವ ನಿರೀಕ್ಷೆ ಬಿಜೆಪಿಯಲ್ಲಿತ್ತು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಆ ಲೆಕ್ಕಾಚಾರವೆಲ್ಲ ತಲೆಕೆಳಗಾಗಿದೆ. ಈಗಾಗಲೇ ರಾಜ್ಯದಲ್ಲಿ ಎರಡು ಹಂತದ ಚುನಾವಣೆ ಮುಗಿದಿದ್ದು, ಜೂನ್‌ 4 ರಂದು ಚುನಾವಣಾ ಫಲಿತಾಂಶ ಹೊರಬರಲಿದೆ. ಇತ್ತ ಕಾಂಗ್ರೆಸ್‌ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನ ನೀಡುವ ಮೂಲಕ 135 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಅದರಂತೆ ಲೋಕಸಭಾ ಚುನಾವಣೆಯಲ್ಲಿಯೂ ಗ್ಯಾರಂಟಿ ಯೋಜನೆಗಳನ್ನೇ ಕೈ ನಾಯಕರು ಅಸ್ತವನ್ನಾಗಿ ಮಾಡಿಕೊಂಡು ಚುನಾವಣೆಯನ್ನ ಎದುರಿಸಿದ್ದಾರೆ.

Lok Sabha Election 2024: ರಾಜ್ಯ ಸರ್ಕಾರದ ಕೈ ಸೇರಿದ ಗುಪ್ತಚರ ವರದಿ; ಮೈತ್ರಿಗೆ ಶಾಕ್-‌ ಕಾಂಗ್ರೆಸ್‌ ಗೆಲ್ಲುವ ಸ್ಥಾನಗಳೆಷ್ಟು?

ಇತ್ತ ಚುನಾವಣೆ ಬಳಿಕ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ಆಂತರಿಕ ವರದಿಯೊಂದು ಕೈ ಸೇರಿದ್ದು, ಗುಪ್ತಚರ ವರದಿಯಲ್ಲಿನ ಅಂಕಿ ಅಂಶಗಳನ್ನ ಕಂಡು ರಾಜ್ಯ ಕಾಂಗ್ರೆಸ್‌ ನಾಯಕರು ಸಂತಸಗೊಂಡಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲೂ ಸಹ ಕಾಂಗ್ರೆಸ್‌ ನಾಯಕರು ಬಿಜೆಪಿಗಿಂತಲೂ ಉತ್ತಮ ಸಾಧನೆ ಮಾಡುವ ವಿಶ್ವಾಸವನ್ನು ವ್ಯಕ್ತಪಡಿಸಿದ್ರು. ಅದರಂತೆ ಕಾಂಗ್ರೆಸ್‌ ನಾಯಕರು 20 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂಬ ವಿಶ್ವಾಸವನ್ನ ವ್ಯಕ್ತಪಡಿಸಿದ್ರು.

ಕಾಂಗ್ರೆಸ್‌ ನಾಯಕರ ಕೈ ಸೇರಿದ ವರದಿ ಹೇಳಿದ್ದೇನು?

ಕಳೆದ ಎರಡು ದಶಕಗಳಿಂದ ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಳಪೆ ಸಾಧನೆಗೆ ಈ ಫಲಿತಾಂಶ ಅಂತ್ಯ ಹಾಡುವ ಸಾಧ್ಯತೆ ಇದೆ ಎಂದು ಆಂತರಿಕ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಮೂಲಗಳು ತಿಳಿಸಿವೆ. 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಕಳೆದ ವಿಧಾನ ಸಭಾ ಚುನಾವಣಾ ಫಲಿತಾಂಶದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆ ಇದೆ ಎಂದು ಹೇಳಲಾಗಿದೆ.

ಈಗಾಗಲೇ ಕಾಂಗ್ರೆಸ್‌ ನಾಯಕರ ಕೈ ಸೇರಿರುವ ಆಂತರಿಕ ವರದಿಯಂತೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಫೈಕಿ ಕಾಂಗ್ರೆಸ್‌ ಒಟ್ಟು 14 ಕ್ಷೇತ್ರಗಳನ್ನು ಗೆಲ್ಲಬಹುದು ಎಂಬ ನಿರೀಕ್ಷೆಯಲ್ಲಿ ಕಾಂಗ್ರೆಸ್‌ ನಾಯಕರು ಇದ್ದಾರೆ. ಮೊದಲ ಹಂತದಲ್ಲಿ ನಡೆದ ಚುನಾವಣೆಯಲ್ಲಿ ಆರು ಕ್ಷೇತ್ರ ಹಾಗೂ ಎರಡನೇ ಹಂತದಲ್ಲಿ 8 ಕ್ಷೇತ್ರಗಳನ್ನು ನಾವು ಗೆಲುವು ಸಾಧಿಸುತ್ತೇವೆ ಎನ್ನುವುದು ಕಾಂಗ್ರೆಸ್‌ನ ಆಂತರಿಕ ವರದಿಯಲ್ಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ತಳಹಂತದಲ್ಲಿ ಬೂತ್‌ ಏಜೆಂಟ್‌ಗಳು ಕೊಟ್ಟಿರುವ ಅಂಕಿ – ಅಂಶಗಳು ವಾಸ್ತವಕ್ಕೆ ಹತ್ತಿರವಾಗಿರುತ್ತವೆ ಎಂಬ ವಿಶ್ವಾಸದಲ್ಲಿ ಕಾಂಗ್ರೆಸ್‌ ನಾಯಕರು ಇದ್ದಾರೆ. ಹೀಗಾಗಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 14 ಕ್ಷೇತ್ರಗಳಿಗಿಂತಲೂ ಹೆಚ್ಚು ಕ್ಷೇತ್ರದಲ್ಲಿ ನಾವು ಗೆಲ್ಲಬಹುದು ಎಂಬ ನಿರೀಕ್ಷೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಇದ್ದಾರೆ ಎನ್ನಲಾಗಿದೆ.

ಈ ಬಾರಿ ರಾಜ್ಯದಲ್ಲಿ ಬಿಜೆಪಿ 25 ಹಾಗೂ ಜೆಡಿಎಸ್‌ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೆ, ಕಾಂಗ್ರೆಸ್‌ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಇತ್ತ ಆಡಳಿತರೂಢ ಕಾಂಗ್ರೆಸ್‌ ಗೆ ಲೋಕಸಭಾ ಚುನಾವಣೆ ಪ್ರತಿಷ್ಠೆಯಾಗಿತ್ತು. ಹೀಗಾಗಿ ಈ ಬಾರಿಯೂ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನೇ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿತ್ತು. ಇತ್ತ ಕಾಂಗ್ರೆಸ್‌ ಗೆ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿದ್ದರು, ಇತ್ತ ಕಾಂಗ್ರೆಸ್‌ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹೊಂದಿತ್ತು. ಮೈತ್ರಿ ನಾಯಕರು ಹಾಗೂ ಕಾಂಗ್ರೆಸ್‌ ನಾಯಕರು ಹೆಚ್ಚು ಸ್ಥಾನಗಳನ್ನ ಗೆಲ್ಲುವ ವಿಶ್ವಾಸದಲ್ಲಿದ್ದು, ಜೂನ್‌ 4ರಂದು ಅಧಿಕೃತ ಫಲಿತಾಂಶ ಹೊರಬೀಳುವವರೆಗೂ ಕಾಯಬೇಕಾಗಿದೆ.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ