ವಾರಣಾಸಿ: ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ಸ್ಪರ್ಧೆಗಿಳಿದಿದ್ದ ಹಾಸ್ಯನಟ ಶ್ಯಾಮ್ ರಂಗೀಲಾ (Shyam Rangeela) ಸೇರಿದಂತೆ 33 ಅಭ್ಯರ್ಥಿಗಳ ನಾಮಪತ್ರಗಳನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.
ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರಕ್ಕೆ 40 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದರು.
ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅನುಕರಿಸುವ ವೀಡಿಯೊಗಳಿಗೆ ಹೆಸರುವಾಸಿಯಾಗಿರುವ ಹಾಸ್ಯನಟ ಶ್ಯಾಮ್ ರಂಗೀಲಾ ಅವರು ಮೇ 14ರಂದು ವಾರಣಾಸಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದರು.
ಇದೀಗ ಶ್ಯಾಮ್ ರಂಗೀಲಾ ಸೇರಿದಂತೆ 33 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ 6 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ವಾರಣಾಸಿಯಲ್ಲಿ ಜೂನ್ 1 ರಂದು ಮತದಾನ ನಡೆಯಲಿದೆ. ಕೊನೆಯ ಹಂತಕ್ಕೆ ನಾಮಪತ್ರ ಸಲ್ಲಿಸಲು ಮೇ 14 ಕೊನೆಯ ದಿನವಾಗಿತ್ತು. ಮೇ 15 ರಂದು ನಾಮಪತ್ರಗಳನ್ನು ಪರಿಶೀಲಿಸಲಾಯಿತು.