ಗದಗ: ಅಂಜಲಿ ಕೊಲೆ ಬೆದರಿಕೆ ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ ಕಾರಣರಾಗಿದ್ದಾರೆ. ರಾಜ್ಯದಲ್ಲಿ ಪೊಲೀಸರನ್ನು ರಾಜಕೀಯ ವಿರೋಧಿಗಳ ದಮನಕ್ಕಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಗದಗನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು.ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ. ನೇಹಾ ತರನಾಗಿ ಕೊಲೆ ಮಾಡುವುದಾಗಿ ಹೇಳಿದ್ದಾನೆ. ಈ ಬಗ್ಗೆ ಅಂಜಲಿ ಮನೆಯವರು ದೂರು ಸಹ ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದರೆ ಈ ಕೊಲೆ ತಪ್ಪಿಸಬಹುದಿತ್ತು. ಕೊಲೆಯನ್ನು ತಡೆಯದೇ ಪರೋಕ್ಷವಾಗಿ ಕೊಲೆಗೆ ಪೊಲೀಸರು ಕಾರಣರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.