Breaking News

ಆರೋಪಿಯ ಬಂಧಿಸದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿ: ದಿಂಗಾಲೇಶ್ವರ ಸ್ವಾಮೀಜಿ

Spread the love

ಆರೋಪಿಯ ಬಂಧಿಸದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿ: ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿಯನ್ನು ಈವರೆಗೂ ಬಂಧಿಸಿಲ್ಲ. ಇದು ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ಬಾಮೀಜಿ ಹೇಳಿದರು.ಆರೋಪಿಯ ಬಂಧಿಸದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿ: ದಿಂಗಾಲೇಶ್ವರ ಸ್ವಾಮೀಜಿ

ಗುರುವಾರ ಅಂಜಲಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಯ ಬೆದರಿಕೆ ಕುರಿತು ಅಂಜಲಿ ಅವರ ಸಹೋದರಿ ಪೊಲೀಸರ ಗಮನಕ್ಕೆ ತಂದಿದ್ದಳು.

ರಕ್ಷಣೆ ನೀಡುವಂತೆ ಕೋರಿದ್ದಳು. ಪೊಲೀಸರು ಆಗಲೇ ಎಚ್ಚೆತ್ತುಕೊಂಡಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದರು.

ಅಂಜಲಿ‌ ಕೊಲೆ ಅಮಾನವೀಯ ಘಟನೆ. ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸುರಕ್ಷಿತವಾಗಿ ಬದುಕಲು ಅಸಾಧ್ಯವಾದ ವಾತಾವರಣ ಹುಬ್ಬಳ್ಳಿಯಲ್ಲಿ ನಿರ್ಮಾಣವಾಗಿದೆ ಎಂದು ಹೇಳಿದರು.

ಪ್ರೇಮ ಪ್ರಕರಣದ ಕಾರಣಕ್ಕೆ ಈ ರೀತಿ ಯುವತಿಯರನ್ನು ಅಮಾನುಷವಾಗಿ ಕೊಲೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸರ್ಕಾರ ಕೂಡಲೇ ಎಚ್ಚರ ವಹಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ