Breaking News

ರೈಲು ಏರಿ ಸೆಲ್ಫಿ ಕ್ಲಿಕಿಸಿಕೊಳ್ಳುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಯುವಕ ಸಾವು

Spread the love

ಚೆನ್ನೈ,ನ.20- ಸರಕು ರೈಲಿನ(ಗೂಡ್ಸ್ ರೈಲ್) ಮೇಲೆ ಹತ್ತಿ ಸೆಲ್ಫಿ ಕ್ಲಿಕಿಸಿಕೊಳ್ಳುತ್ತಿದ್ದ ಯುವಕನಿಗೆ ಹೈಟೆಕ್ಷಂನ್ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುವೆನಲಿಯಲ್ಲಿ ನಡೆದಿದೆ. ಎಂ.ಗಣೇಶ್ವರ(15) ವಿದ್ಯುದ್ಘಾತಕ್ಕೆ ತುತ್ತಾಗಿರುವ ಯುವಕ.

ರೈಲ್ವೆ ಜಂಕ್ಷನ್‍ನಲ್ಲಿ ಗೂಡ್ಸ್ ರೈಲು ಮೂಲಕ ಸಾಗಿಸುವ ಆಹಾರ ಧಾನ್ಯಗಳನ್ನು ಪರಿಶೀಲಿಸುವ ಇನ್‍ಸ್ಪೆಕ್ಟರ್ ಮಗ ಈತ. ನಿನ್ನೆ ತನ್ನ ತಂದೆಯೊಂದಿಗೆ ಬಂದಿದ್ದ. ಬೇರೆ ಪ್ಲಾಟ್‍ಫಾರ್ಮ್‍ನಲ್ಲಿ ರೈಲು ಹತ್ತಿದ್ದನು. ಅಲ್ಲೇ ಹಾದುಹೋಗಿರುವ ಹೈಟೆನ್ಷನ್ ತಂತಿಯನ್ನು ಗಮನಿಸದೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದನು.ಈ ವೇಳೆ 25,000 ವೋಲ್ಟೇಜ್ ತಂತಿ ತಗುಲಿ ತಕ್ಷಣವೇ ಸಾವನ್ನಪ್ಪಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ