ಬೆಳಗಾವಿ, ಮೇ.: ಸ್ಕ್ರೂಡ್ರೈವರ್ನಿಂದ ಚುಚ್ಚಿ ಯುವಕನೋರ್ವನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಮಹಾಂತೇಶನಗರದ ಬ್ರಿಡ್ಜ್ ಬಳಿ (ಮೇ.16) ಮಧ್ಯಾಹ್ನ ನಡೆದಿದೆ.
ಬೆಳಗಾವಿ(Belagavi)ಯ ಗಾಂಧಿನಗರ ನಿವಾಸಿ ಇಬ್ರಾಹಿಂ ಗೌಸ್(22) ಕೊಲೆಯಾದ ಯುವಕ.
ಪ್ರೇಯಸಿ ಜೊತೆಬೈಕ್ನಲ್ಲಿ ಹೊರಟಿದ್ದ ಆಕೆಯ ಸಹೋದರನನ್ನ ಅಡ್ಡಗಟ್ಟಿದ ಆರೋಪಿ ಮುಜಾಮಿಲ್ ಸತ್ತಿಗೇರಿ, ಸ್ಕ್ರೂಡ್ರೈವರ್ನಿಂದ ಇರಿದು ಪರಾರಿಯಾಗಿದ್ದ.

ಗಾಯಾಳು ಗೌಸ್ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು.
ಆದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Laxmi News 24×7