Breaking News

ಅಂಜಲಿ’ ಹಂತಕನಿಂದ ಮತ್ತೊಂದು ಕಿರಿಕ್ : ರೈಲಿನಲ್ಲಿ ಮಹಿಳೆಗೆ ಚಾಕು ತೋರಿಸಿ ಹೆದರಿಸಿದ್ದ ಆರೋಪಿ ಗಿರೀಶ್!

Spread the love

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ 20 ವರ್ಷದ ಯುವತಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಿರೀಶ್ ಅಲಿಯಾಸ್ ವಿಶ್ವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬುಧವಾರ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ ಗಿರೀಶ್ ನನ್ನು ಗುರುವಾರ ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಖಚಿತಪಡಿಸಿದ್ದಾರೆ.

'ಅಂಜಲಿ' ಹಂತಕನಿಂದ ಮತ್ತೊಂದು ಕಿರಿಕ್ : ರೈಲಿನಲ್ಲಿ ಮಹಿಳೆಗೆ ಚಾಕು ತೋರಿಸಿ ಹೆದರಿಸಿದ್ದ ಆರೋಪಿ ಗಿರೀಶ್!

ಮೈಸೂರಿನಿಂದ ಹುಬ್ಬಳ್ಳಿಗೆ ರೈಲಿನಲ್ಲಿ ತೆರಳುತ್ತಿದ್ದ ಈತ ರೈಲಿನಲ್ಲಿಯೂ ಕಿರುಕ್ ಮಾಡಿದ್ದ. ರೈಲಿನಲ್ಲಿ ತುಮಕೂರು ಮೂಲದ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದ. ಈ ವೇಳೆ ಉಳಿದ ಪ್ರಯಾಣಿಕರು ಆರೋಪಿ ಗಿರೀಶ್ ನನ್ನು ಹಿಡಿದು ಥಳಿಸಿದ್ದರು. ಅಲ್ಲದೇ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಅಂಜಲಿಯನ್ನು ಕೊಲೆ ಮಾಡಿದ ಬಳಿಕ ಹುಬ್ಬಳ್ಳಿಯಿಂದ ಹಾವೇರಿಗೆ ತೆರಳಿದ್ದ ಆರೋಪಿ ಬಳಿಕ ಹಾವೇರಿಯಿಂದ ಮೈಸೂರಿಗೆ ರೈಲಿನಲ್ಲಿ ಹೋಗಿದ್ದ. ಬಳಿಕ ಮಹಾರಾಜ ಹೋಟೆಲ್ ನಲ್ಲಿ ಮಲಗಿದ್ದ. ನಂತರ ಮೈಸೂರಿನಿಂದ ಹುಬ್ಬಳ್ಳಿಗೆ ವಾಪಾಸ್ ಆಗುತ್ತಿದ್ದಾಗ ದಾವಣಗೆರೆಯ ಮಾಯಕೊಂಡದ ರೈಲು ನಿಲ್ದಾಣದಲ್ಲಿ ರೈಲಿನಿಂದ ಜಿಗಿದು ತಪ್ಪಿಸಿಕೊಳ್ಳಲು ಯತ್ನಿಸಿದ್ದ ಈ ವೇಳೆ ಆರೋಪಿ ಗಿರೀಶನನ್ನು ಪೊಲೀಸರು ಬಂಧಿಸಿದ್ದಾರೆ.

ತನ್ನನ್ನು ಪ್ರೀತಿಸುತ್ತಿದ್ದ ಗಿರೀಶ್ ನ ಮದುವೆ ಪ್ರಸ್ತಾಪವನ್ನು ಅಂಜಲಿ ತಿರಸ್ಕರಿಸಿದ್ದಳು ಎಂದು ವರದಿಯಾಗಿದೆ. ಹುಬ್ಬಳ್ಳಿಯ 21 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಸಹಪಾಠಿ ಚಾಕುವಿನಿಂದ ಇರಿದು ಕೊಂದಂತೆಯೇ ಗಿರೀಶ್ ಸಂತ್ರಸ್ತೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

ಬುಧವಾರ ಮುಂಜಾನೆ ಗಿರೀಶ್ ಅಂಜಲಿ ಮನೆಗೆ ನುಗ್ಗಿ, ಆಕೆಗೆ ಹಲವು ಬಾರಿ ಇರಿದು ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಈ ಘಟನೆ ಬೆಳಕಿಗೆ ಬಂದ ಕೂಡಲೇ ಸ್ಥಳೀಯರಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಪ್ರತಿಭಟನೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ