ಬೆಂಗಳೂರು,ನ.20- ವಿಧಾನಸಭೆಯಲ್ಲಿ ಬಹುಮತದಿಂದ ಅಂಗೀಕೃತವಾದ ಮಸೂದೆಗಳನ್ನು ಉದ್ದೇಶಪೂರ್ವಕವಾಗಿ ತಡೆಹಿಡಿಯಲಾಗುತ್ತದೆ ಎಂಬ ಕಾರಣಕ್ಕೆ ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಸಜ್ಜಾಗಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಪರಿಷತ್‍ಗೆ ಹೊಸ ಸಭಾಪತಿ ಆಯ್ಕೆ ಮಾಡಲು ಚಿಂತಿಸಿದೆ ಎಂದು ಮೂಲಗಳು ತಿಳಿಸಿವೆ.
ಉಭಯ ಪಕ್ಷಗಳ ನಡುವೆ ಮೈತ್ರಿಯಾದರೆ, ಬಿಜೆಪಿಗೆ ಸಭಾಪತಿ ಹಾಗೂ ಜೆಡಿಎಸ್‍ಗೆ ಉಪಸಭಾಪತಿ ಸ್ಥಾನ ಹಂಚಿಕೆಯಾಗಲಿದೆ. ಡಿಸೆಂಬರ್ 7 ರಿಂದ 15 ರವರೆಗೆ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಮುಂದಾಗಿದ್ದು, ಇದಕ್ಕಾಗಿ ತಯಾರಿ ಕೂಡ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.
Laxmi News 24×7