Breaking News

ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Spread the love

ಳೆದ ವರ್ಷದ ಮಳೆಗಾಲ ಋತುವಿನಲ್ಲಿ ವರುಣ ಕೈಕೊಟ್ಟಿದ್ದರಿಂದಾಗಿ ರಾಜ್ಯದಲ್ಲಿ ಬರಗಾಲ ಆವರಿಸಿ, ಬೆಳೆ ಹಾನಿಗೊಳಗಾಗಿ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇದೇ ವೇಳೆ ಹವಾಮಾನ ವೈಪರೀತ್ಯದಿಂದಾಗಿ ಈ ವರ್ಷದ ಬೇಸಗೆಯಲ್ಲಿ ರಾಜ್ಯದ ಬಹುತೇಕ ಎಲ್ಲೆಡೆ ತಾಪಮಾನ ಅಧಿಕವಾಗಿ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡುವಂತೆ ಮಾಡಿತ್ತು.

ಇನ್ನು ಬರ ಪರಿಹಾರ ವಿಚಾರವಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವೆ ಹಗ್ಗ ಜಗ್ಗಾಟ ನಡೆದು ಕೊನೆಗೂ ಕೇಂದ್ರ ಸರಕಾರ ಅನುದಾನ ಬಿಡುಗಡೆ ಮಾಡಿದ್ದು ಈಗ ರಾಜ್ಯ ಸರಕಾರ ರೈತರ ಖಾತೆಗಳಿಗೆ ಬರ ಪರಿಹಾರ ಮೊತ್ತವನ್ನು ಜಮೆ ಮಾಡತೊಡಗಿದೆ.

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

ಆದರೆ ಪರಿಹಾರ ಮೊತ್ತವನ್ನು ರೈತರ ಖಾತೆಗಳಿಗೆ ಜಮೆ ಮಾಡುವ ವೇಳೆ ಈ ಹಿಂದೆ ರಾಜ್ಯ ಸರಕಾರ ನೀಡಿದ್ದ 2,000 ರೂ. ಗಳನ್ನು ಕಡಿತ ಮಾಡಿ ಅಥವಾ ಈ ಮೊತ್ತವನ್ನು ರೈತರ ಸಾಲಗಳಿಗೆ ಹೊಂದಾಣಿಕೆ ಮಾಡಿ ಹಾಲಿ ಪರಿಹಾರ ಮೊತ್ತವನ್ನು ಜಮೆ ಮಾಡುತ್ತಿರುವುದು ರೈತರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಬರದಿಂದ ಬೆಳೆ ಹಾನಿಗೊಳಗಾಗಿ ತೀವ್ರ ಸಂಕಷ್ಟದಲ್ಲಿ ಸಿಲುಕಿರುವ ರೈತರಿಗೆ ಪರಿಹಾರ ವಿತರಿಸುವ ಸಂದರ್ಭದಲ್ಲಿಯೂ ರಾಜ್ಯ ಸರಕಾರ ಈ ತೆರನಾದ ಜಿಪುಣತನ ಪ್ರದರ್ಶಿಸುತ್ತಿರುವುದು ಸರಿಯಲ್ಲ.

ಕಳೆದೆರಡು ವಾರಗಳಿಂದೀಚೆಗೆ ರಾಜ್ಯದ ಬಹುತೇಕ ಎಲ್ಲೆಡೆ ಬೇಸಗೆ ಮಳೆ ಸುರಿಯಲಾರಂಭಿಸಿದ್ದು, ರೈತರು ಮಾತ್ರವಲ್ಲದೆ ಇಡೀ ರಾಜ್ಯದ ಜನತೆ ನಿಟ್ಟುಸಿರು ಬಿಡುವಂತೆ ಮಾಡಿದೆ. ರೈತರು ಈಗಾಗಲೇ ಮುಂದಿನ ಮುಂಗಾರು ಋತುವಿನ ಬೇಸಾಯ ಚಟುವಟಿಕೆಗಳಿಗೆ ಸಿದ್ಧತ ಕಾರ್ಯದಲ್ಲಿ ನಿರತರಾಗಿದ್ದಾರೆ.


Spread the love

About Laxminews 24x7

Check Also

DCM ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ CBI

Spread the love ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ