Breaking News

ಪ್ರಜ್ವಲ್​ರನ್ನು ಭಾರತಕ್ಕೆ ಕರೆತರುವ ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ: ಗೃಹ ಸಚಿವ ಡಾ. ಪರಮೇಶ್ವರ್

Spread the love

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿರುವ ಹಾಸನದ ಹಾಲಿ ಸಂಸದ, ಪ್ರಜ್ವಲ್​ ರೇವಣ್ಣಗೆ ಸಂಬಂಧಿಸಿದ ಲೈಂಗಿಕ ಪ್ರಕರಣ ಇದೀಗ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮತ ಚಲಾಯಿಸಿದ ಬಳಿಕ ರಾಜ್ಯ ಬಿಟ್ಟು ವಿದೇಶಕ್ಕೆ ಪರಾರಿಯಾದ ಪ್ರಜ್ವಲ್, ತನ್ನ ವಿರುದ್ಧ ಕೇಳಿಬಂದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಒಂದು ತಿಂಗಳಾಗುತ್ತಿದ್ದರೂ ಸಹ ಇನ್ನೂ ತವರಿಗೆ ಮರಳಿಲ್ಲ.

ಸದ್ಯ ಇದು ಭಾರೀ ಅನುಮಾನಕ್ಕೆ ಕಾರಣವಾಗಿದೆ.

ಪ್ರಜ್ವಲ್​ರನ್ನು ಭಾರತಕ್ಕೆ ಕರೆತರುವ ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ: ಗೃಹ ಸಚಿವ ಡಾ. ಪರಮೇಶ್ವರ್

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರುವ ಎಲ್ಲಾ ಪ್ರಯತ್ನಗಳು ಭರದಿಂದ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಮತ್ತೊಮ್ಮೆ ಒತ್ತಿ ಹೇಳಿದರು.

ಕಳೆದ ಏಪ್ರಿಲ್ 27ರಂದು ಜರ್ಮನಿಗೆ ತೆರಳಿದ ಪ್ರಜ್ವಲ್ ರೇವಣ್ಣ ಈ ಪ್ರಕರಣದಿಂದ ಇಡೀ ರಾಜ್ಯ ರಾಜಕೀಯದಲ್ಲಿ ದೊಡ್ಡ ಕೋಲಾಹಲವನ್ನೇ ಎಬ್ಬಿಸಿದ್ದಾರೆ. ಈ ವಿಷಯದಿಂದ ತೀವ್ರ ಕೆಂಡಾಮಂಡಲಗೊಂಡಿರುವ ಕಾಂಗ್ರೆಸ್‌, ಬಿಜೆಪಿ-ಜೆಡಿ(ಎಸ್‌) ನಾಯಕರ ವಿರುದ್ಧ ವ್ಯಾಪಕ ಆಕ್ರೋಶ, ಆರೋಪಗಳನ್ನು ಎಸಗಿದೆ. ಸದ್ಯ ಪ್ರಜ್ವಲ್ ರೇವಣ್ಣರನ್ನು ಕರೆತರುವ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಪರಮೇಶ್ವರ್ ಹೇಳಿರುವುದು ಇದೀಗ ಅನೇಕರನ್ನು ಮತ್ತಷ್ಟು ಕೆರಳಿಸಿದೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ