Breaking News

ಮೇ20ರಂದು ರೇವಣ್ಣ ಭವಿಷ್ಯ ನಿರ್ಧಾರ

Spread the love

ಬೆಂಗಳೂರು: ಮನೆ ಕೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ (Sexual Harassment) ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಎಚ್​ಡಿ ರೇವಣ್ಣಗೆ (HD Revanna) ನೀಡಿದ್ದ ಮಧ್ಯಂತರ ಜಾಮೀನನ್ನ ಕೋರ್ಟ್​ ಸೋಮವಾರದವರೆಗೆ ಮುಂದುವರಿಸಿದೆ. ಶುಕ್ರವಾರ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ವಿಚಾರಣೆ ಮುಂದುವರಿಸಿದ 42ನೇ ಸೆಷನ್​ ನ್ಯಾಯಾಲಯ ಕೋರ್ಟ್​ ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಿ ಆದೇಶ ಹೊರಡಿಸಿದೆ.ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀರ್ಪು ಕಾಯ್ದಿರಿಸಿದ ಕೋರ್ಟ್! ಮೇ20ರಂದು ರೇವಣ್ಣ ಭವಿಷ್ಯ ನಿರ್ಧಾರ

ಅಲ್ಲಿಯವರೆಗೆ ರೇವಣ್ಣಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು ತಿಳಿಸಿದೆ. ರೇವಣ್ಣ ಪರ ಸಿವಿ ನಾಗೇಶ್, ಐಎಸ್​ಟಿ ಎಸ್ ಪಿಪಿ ಜಾಯ್ನಾ ಕೊಠಾರಿ ವಾದ ಮಂಡಿಸಿದರು.

ಮೇ 20ಕ್ಕೆ ರೇವಣ್ಣ ಭವಿಷ್ಯ ನಿರ್ಧಾರ

ಎಚ್‌.ಡಿ.ರೇವಣ್ಣ ವಿರುದ್ಧ ಹೊಳೆನರಸೀಪುರದಲ್ಲಿ ಮನೆಕೆಲಸದಾಕೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಜಾಮೀನಿಗಾಗಿ ಎಚ್​ಡಿ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಗುರುವಾರದಿಂದ ವಿಚಾರಣೆ ನಡೆಸುತ್ತಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತೀರ್ಪನ್ನು ಮೇ.20ಕ್ಕೆ ಕಾಯ್ದಿರಿಸಿದೆ. ಅಲ್ಲಿಯವರೆಗೆ ಈಗ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯುತ್ತದೆ ಎಂದು ತಿಳಿಸಿದೆ.


Spread the love

About Laxminews 24x7

Check Also

ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು?: ಆತ ಏನು ಕೆಲಸ ಮಾಡುತ್ತಿದ್ದಾನೆ?

Spread the loveಇತ್ತೀಚಿನ ದಿನಗಳಲ್ಲಿ ನೀವು ಇನ್ಸ್ಟಾಗ್ರಾಮ್ ಅಥವಾ ಯೂಟ್ಯೂಬ್ ರೀಲ್ಸ್ ನೋಡುವಾಗ ಕೈಯಲ್ಲಿ ಟೀ ಕಪ್ ಹಿಡಿದು ನಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ