ಬೆಂಗಳೂರು: ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ವಿಧಾನಸೌಧ ದ್ವಾರದ ಮೆಟಲ್ ಡಿಟೆಕ್ಟರ್, ನೂತನ ಬ್ಯಾಗೇಜ್‌ಸ್ಕ್ಯಾನರ್ ಯಂತ್ರಗಳನ್ನು ಪರಮೇಶ್ವರ್ ಪರಿಶೀಲಿಸಿದರು.
ವಿಧಾನಸೌಧ ಡಿಸಿಪಿ ನೇತೃತ್ವದಲ್ಲಿ ಭದ್ರತಾ ಕ್ರಮಗಳ ಪರಿಶೀಲನೆ ಹಾಗೂ ಮಾಹಿತಿಯನ್ನು ಪರಮೇಶ್ವರ್ ಪಡೆದರು.

ನಂತರ ಮಾತನಾಡಿದ ಅವರು, ವಿಧಾನಸೌಧಕ್ಕೆ ಬರಬೇಕು ಅಂದರೆ ಇನ್ನು ಮುಂದೆ ಕ್ಯೂ ಆರ್ ಕೋಡ್ ಇರುವ ಪಾಸ್‌ಗಳನ್ನು ನೀಡಲಾಗುತ್ತದೆ. ವಿಧಾನಸೌಧದಲ್ಲಿ ಯಾರಾದರೂ ಮೆಟಲ್ ಸಾಧನ ತೆಗೆದುಕೊಂಡು ಹೋಗುತ್ತಿದ್ದರೆ ಈ ಬ್ಯಾಗೇಜ್ ಸ್ಕ್ಯಾನರ್‌ನಲ್ಲಿ ಪತ್ತೆಯಾಗುತ್ತದೆ. ಕಳೆದ 3 ವರ್ಷಗಳಿಂದ ಈ ಬ್ಯಾಗೇಜ್ ಸ್ಕ್ಯಾನರ್ ಹಾಳಾಗಿತ್ತು.
Laxmi News 24×7