Breaking News

SSLC ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಗ್ರೇಸ್‌ ಮಾರ್ಕ್ಸ್‌ ರದ್ದು; ಸಿಎಂ

Spread the love

ಬೆಂಗಳೂರು: ಬರ ಪರಿಹಾರ, ಮುಂಗಾರು ಮಳೆ, ಬಿತ್ತನೆ ಬೀಜ, ರಸ ಗೊಬ್ಬರ ವಿತರಣೆ, ಶಿಕ್ಷಣ, ಕಾನೂನು ಸುವ್ಯವಸ್ಥೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.

20 ಗ್ರೇಸ್‌ ಮಾರ್ಕ್ಸ್‌ (SSLC Grace Marks) ಕೊಟ್ಟಿದ್ದಕ್ಕೆ ಗರಂ ಆಗಿದ್ದಾರೆ. ಯಾರನ್ನು ಕೇಳಿ ಹೆಚ್ಚುವರಿ ಅಂಕವನ್ನು ಕೊಟ್ಟಿರಿ? ಶಿಕ್ಷಣ ಗುಣಮಟ್ಟ ಕುಸಿದಿದ್ದು ಏಕೆ? ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡರು.

ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಎಸ್‌ಎಸ್‌ಎಲ್‌ಸಿಗೆ ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರುವ ಬಗ್ಗೆ ತೀವ್ರ ಅಸಮಾಧಾನವನ್ನು ಹೊರಹಾಕಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡಾ 20 ಮಾರ್ಕ್ಸ್‌ ಅನ್ನು ಏಕೆ ಕೊಟ್ಟಿರಿ? ಯಾರನ್ನು ಕೇಳಿ ಹೆಚ್ಚುವರಿ ಅಂಕ ಕೊಟ್ಟಿರಿ? ಹೀಗೆ ಅಂಕ ಕೊಡುವ ಅಗತ್ಯತೆ ಏನಿತ್ತು? ಶಿಕ್ಷಣದ ಗುಣಮಟ್ಟ ಕುಸಿದಿದ್ದೇಕೆ? ಎಂದು ಶಿಕ್ಷಣ ಇಲಾಖೆ ಕಾರ್ಯದರ್ಶಿ ಮೇಲೆ ಗರಂ ಆಗಿದ್ದಲ್ಲದೆ, ಪ್ರಶ್ನೆ ಮೇಲೆ ಪ್ರಶ್ನೆ ಮಾಡಿದರು.

ಗ್ರೇಸ್‌ ಮಾರ್ಕ್ಸ್‌ ಮರು ಪರಿಶೀಲಿಸಿ

ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧಗಳು ಕೇಳಿ ಬರುತ್ತಿವೆ. ಮೊದಲೇ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳು ಬರುತ್ತಿವೆ. ಅದರ ಮಧ್ಯೆ ಇದೂ ಒಂದು ಸೇರಿಕೊಂಡಿದೆ. ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಹಾಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.


Spread the love

About Laxminews 24x7

Check Also

ರಾಯಬಾಗ: ರೇಬಿಸ್ ಲಸಿಕಾ ಅಭಿಯಾನಕ್ಕೆ ಚಾಲನೆ

Spread the love ರಾಯಬಾಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರಾಮಕೃಷ್ಣ ಪಬ್ಲಿಕ್ ಸ್ಕೂಲ್ ಬೆಕ್ಕೇರಿ ಇವರ ಸಹಯೋಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ