ನವದೆಹಲಿ,ನ.20- ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪರಿಸರ ಮಾಲಿನ್ಯ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೆಲ ದಿನಗಳ ಮಟ್ಟಿಗೆ ಹೊರಭಾಗದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ವೈದ್ಯರು ಹಾಗೂ ಕುಟುಂಬ ಸದಸ್ಯರ ಸಲಹೆ ಮೇರೆಗೆ ಇಂದು ಸಂಜೆಯೊಳಗೆ ಸೋನಿಯಾ ಗಾಂಧಿ ಅವರು ಗೋವಾ ಅಥವಾ ಚೆನ್ನೈನಲ್ಲಿ ತಂಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕಳೆದ ಹಲವು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿರುವ ಸೋನಿಯಾ ಗಾಂಧಿಗೆ ಉಸಿರಾಟದ ತೊಂದರೆಯಿದೆ. ದೆಹಲಿಯಲ್ಲಿ ವಾಯುಮಾಲಿನ್ಯ ಹದಗೆಟ್ಟಿರುವ ಕಾರಣ ಆರೋಗ್ಯದ ಮೇಲೆ ಪರಿಣಾಮ ಬೀರಬಹುದೆಂಬ ಹಿನ್ನೆಲೆಯಲ್ಲಿ ಚೆನ್ನೈ ಅಥವಾ ಗೋವಾದಲ್ಲಿ ತಂಗಲಿದ್ದಾರೆ ಎಂದು ತಿಳಿದುಬಂದಿದೆ. ಸೋನಿಯಾ ಗಾಂಧಿ ಜೊತೆ ಪುತ್ರ ರಾಹುಲ್ ಗಾಂಧಿ ಅಥವಾ ಪ್ರಿಯಾಂಕ ಗಾಂಧಿ ವಾದ್ರಾ ತೆರಳುವ ಸಂಭವವಿದೆ