Breaking News

ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್‌ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

Spread the love

ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜೂಜು (ಇಸ್ಪೀಟ್) ಆಡಿಸಲು 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಪಿಎಸ್‌ಐ ಮತ್ತು ಕಾನ್ ಸ್ಟೆಬಲ್ ಬಿದ್ದಿದ್ದಾರೆ.

ತಡಸ ಪೊಲೀಸ್ ಠಾಣೆಯ ಪಿಎಸ್‌ಐ ಶರಣಬಸಪ್ಪ ಕಾಂದೆ ಮತ್ತು ಕಾನ್ ಸ್ಟೆಬಲ್ ಸುರೇಶ ಮಾನೋಜಿ ಬಂಧಿತರು.

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್‌ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

ಜೂಜು ಆಡಿಸುವ ಸಂಬಂಧ ಪ್ರಭಾಕರ ಈರಪ್ಪ ಬೆಟ್ಟದೂರ ಅವರಿಗೆ 5 ಲಕ್ಷ ಲಂಚದ ಬೇಡಿಕೆ ಇಟ್ಟು, ಮಧ್ಯವರ್ತಿ ಕಿರಣ ವನಹಳ್ಳಿ ಮೂಲಕ 2 ಲಕ್ಷ ಮುಂಗಡ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.

ಹಾವೇರಿ ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್ ನೇತೃತ್ವದಲ್ಲಿ ದಾಳಿ ನಡೆಯಿತು.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ