ಬೆಂಗಳೂರು ಮೇ 18: ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು ಮಧ್ಯಾಹ್ನ ವರುಣನ ಅರ್ಭಟ ಶುರುವಾಗಿದೆ. ಮುಂದಿನ ಕೆಲ ದಿನಗಳವರೆಗೆ ಮಳೆ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಗರದ ವಿಜಯನಗರ, ರಾಜಾಜಿನಗರ, ಮಾಗಡಿ ರಸ್ತೆ, ಮೈಸೂರು ರಸ್ತೆ, ಕೆಆರ್ ಮಾರುಕಟ್ಟೆ, ಗಾಂಧಿ ಬಜಾರ್ ಸೇರಿದಂತೆ ಹಲವೆಡೆ ಮಳೆ ತೀವ್ರಗೊಂಡಿದೆ.
ಏಕಾಏಕಿ ಮಳೆ ಜೋರಾಗಿ ಸುರಿಯುತ್ತಿದ್ದು ಸಂಜೆವರೆಗೂ ಮಳೆಯಾಗುವ ಸಾಧ್ಯತೆ ಇದೆ. ಇಂದು ಬೆಳಗ್ಗೆ ಕೂಡ ಹಲವೆಡೆ ಜಿಟಿಜಿಟಿ ಮಳೆಯಾಗಿದ್ದು, ತಂಪಾದ ವಾತಾವರಣವಿತ್ತು.
ಏಕಾಏಕಿ ಸುರಿದ ಭಾರೀ ಮಳೆಗೆ ರಸ್ತೆಗಳಲ್ಲಿ ನೀರು ನಿಂತುಕೊಂಡಿದೆ. ಇನ್ನೂ ವಾಹನ ಸವಾರರು ಮೆಟ್ರೋ ಪಿಲ್ಲರ್ ಹಾಗೂ ರಸ್ತೆ ಬದಿಯ ಅಂಗಡಿ ಮಳಿಗೆಗಳ ಆಶ್ರಯ ಪಡೆದಿರುವ ದೃಶ್ಯಗಳು ಕಂಡುಬರುತ್ತಿವೆ. ಮಳೆ ಹೀಗೆ ಮುಂದುವರೆದರೆ ಕಚೇರಿಗಳಿಗೆ ಹೋಗಿ ವಾಪಾಸ್ಸಾಗುವ ಜನರಿಗೆ ಕಿರಿಕಿರಿಯಾಗಲಿದೆ.