ಹುಬ್ಬಳ್ಳಿ: ಇಲ್ಲಿನ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತನ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ಆರು ತಿಂಗಳ ಹಿಂದೆಯೇ ವಿಶ್ವ ಎಂಬಾತ ಬಾಲಕಿ ಬೆನ್ನುಬಿದ್ದು, ಕಿರುಕುಳ ಕೊಟ್ಟು 55 ಗ್ರಾಂ ಚಿನ್ನಾಭರಣ, 8 ಸಾವಿರ ರೂ.
ಇಸಿದುಕೊಂಡು ವಂಚಿಸಿದ್ದಾನೆ ಎಂದು ಆರೋಪಿಸಿ ಬಾಲಕಿಯ ತಂದೆ-ತಾಯಿಯು ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ.
ಆತನ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಸೆಕ್ಷನ್ 420, 504, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಮಗಳಿಗೆ ಮೋಸ ಮಾಡಿದ ಆತನಿಗೆ ಕಠಿಣ ಶಿಕ್ಷೆ ಆಗಬೇಕು. ನಾವು ಕಡು ಬಡವರಾಗಿದ್ದು, ಆತ ಇಸಿದುಕೊಂಡ ನಮ್ಮ ಬಂಗಾರ ಕೊಡಿಸಬೇಕು ಎಂದು ಆಗ್ರಹಿಸಿದರು.