Breaking News

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ್ಯಾಕ್ಟರ್ ಗೆ ಸಿಲುಕಿ ಬಾಲಕ ಸಾವು

Spread the love

ಮೈಸೂರು: ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.ಅಜ್ಜಿಯ ಮನೆಗೆ ಬಂದಿದ್ದಾಗಲೇ 'ಘೋರ' ದುರಂತ; ಟ್ರ್ಯಾಕ್ಟರ್ ಗೆ ಸಿಲುಕಿ ಬಾಲಕ ಸಾವು

ಮೈಸೂರಿನ ನಂಜನಗೂಡು (Nanjangudu) ತಾಲೂಕಿನ ದೇವರಸನಹಳ್ಳಿಯ ವರ್ಷದ ಬಾಲಕ ಭವಿಷ್ ದಾರುಣವಾಗಿ ಸಾವನ್ನಪ್ಪಿದ್ದಾರೆ. ತನ್ನ ತಾಯಿಯ ಜೊತೆ ಅಜ್ಜಿಯ ಮನೆಗೆಂದು ಭವಿಷ್ (8) ಬಂದಿದ್ದ ವೇಳೆಯಲ್ಲಿ ಈಘಟನೆ ನಡೆದಿದೆ.

ಬಾಲಕನ ಒತ್ತಾಯಕ್ಕೆ ಟ್ರ್ಯಾಕ್ಟರ್ ಮೇಲೆ ಸೋದರಮಾವ ಕೂರಿಸಿದ್ದಾರೆ. ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್​ನಿಂದ ಆಯತಪ್ಪಿ ಬಾಲಕ ಕೆಳಗೆ ಬಿದ್ದು, ಟ್ರ್ಯಾಕ್ಟರ್​ನ ರೋಟರಿಗೆ ಸಿಲುಕಿದಾಗ ದೇಹ ತುಂಡಾಗಿ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the loveಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ