ವಿಜಯಪುರ: ಜಮೀನಿನ ತತ್ಕಾಲ್ ಪೋಡಿ ಮಾಡಲು ₹ 47,500 ಲಂಚ ಕೇಳಿದ್ದ ಸರ್ವೆಯರ್ ಮಲ್ಲಪ್ಪ ಜಂಬಗಿ, ಖಾಸಗಿ ಸಹಾಯಕ ಗುರುದತ್ತ ಬಿರಾದಾರ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.
ನಾಲ್ಕು ಎಕರೆ ಜಮೀನಿನ ತತ್ಕಾಲ್ ಪೋಡಿ ಮಾಡಲು ಪ್ರಕಾಶ್ ಸಿಂಗ್ ಎಂಬುವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಲಂಚಬತೆಗೆದುಕೊಳ್ಳುವಾಗ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ₹ 47,500 ನಗದು ವಶಪಡಿಸಿಕೊಂಡು ಸರ್ವೇಯರ್ ಮಲ್ಲಪ್ಪ ಹಾಗೂ ಸಹಾಯಕ ಗುರುದತ್ತನನ್ನು
ಲೋಕಾಯುಕ್ತ ಎಸ್ಪಿ ಮಲ್ಲೇಶ, ಡಿಎಸ್ಪಿ ಸುರೇಶ್ ರೆಡ್ಡಿ, ಸಿಪಿಐ ಆನಂದ ಟಕ್ಕನವರ್ ಆನಂದ ದೋಣಿ ನೇತೃತ್ವದಲ್ಲಿ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ.
Laxmi News 24×7