Breaking News

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ; ಹೆಚ್ ಡಿ ದೇವೇಗೌಡ

Spread the love

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಹೆಚ್​​​ಡಿ ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ದೇವೇಗೌಡರ 91ನೇ ಹುಟ್ಟುಹಬ್ಬ.

ಆ ಪ್ರಯುಕ್ತ ಬೆಂಗಳೂರಿನಲ್ಲಿ ವೆಂಕಟೇಶ್ವರ ದೇವಸ್ಥಾನಕ್ಕೆ ಹೋಗಿ ಅರ್ಚನೆ ಮಾಡಿಸಿದ ಬಳಿಕ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬದ ವಿರುದ್ಧ ರಾಜಕೀಯ ಕುತಂತ್ರ ನಡೆದಿದೆ.ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ; ನಮ್ಮ ಕುಟುಂಬ ವಿರುದ್ಧ ರಾಜಕೀಯ ಕುತಂತ್ರ ನಡೆದಿದೆ: ಹೆಚ್ ಡಿ ದೇವೇಗೌಡ

ಪ್ರಜ್ವಲ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದರ ಬಗ್ಗೆ ತಕರಾರು ಇಲ್ಲ. ಆದರೆ ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ. ಪ್ರಜ್ವಲ್ ಪ್ರಕರಣ ಬಗ್ಗೆ ಕುಮಾರಸ್ವಾಮಿ ಇಡೀ ಕುಟುಂಬದ ಪರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ರೇವಣ್ಣ ಪ್ರಕರಣದ ಬಗ್ಗೆ ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ ಎಂದರು.


Spread the love

About Laxminews 24x7

Check Also

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the loveಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ