Breaking News

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Spread the love

ಬೆಂಗಳೂರು: ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು ಅದರಲ್ಲಿ 548 ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಒದಗಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಶನಿವಾರ ಪತ್ರಿಕೆ ಪ್ರಕಟನೆ ನೀಡಿರುವ ಅವರು, 413 ಗ್ರಾಮಗಳನ್ನು ಒಳಗೊಂಡ 37 ಬಹುಗ್ರಾಮ ಕುಡಿಯುವ ನೀರು ಯೋಜನೆಯ ಜಲಮೂಲ ಒಣಗಿವೆ.

ಈ ಗ್ರಾಮಗಳೂ ಸೇರಿದಂತೆ ಕುಡಿಯುವ ನೀರಿನ ಸಮಸ್ಯೆ ಇರುವ 2,207 ಗ್ರಾಮಗಳ ಪೈಕಿ 548 ಗ್ರಾಮಗಳಿಗೆ 846 ಟ್ಯಾಂಕರ್‌ ಹಾಗೂ 1,659 ಗ್ರಾಮಗಳಿಗೆ 2,098 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸಲಾಗುತ್ತಿದೆ ಎಂದು ಜಿಲ್ಲೆ ಗಳಲ್ಲಿ 480 ಬಹುಗ್ರಾಮ ಯೋಜನೆಗಳು ಕಾರ್ಯನಿರ್ವಹಿಸುತ್ತಿದ್ದು ಈ ಯೋಜನೆಗಳ ಮೂಲಕ 6,828 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ಈ ಯೋಜನೆಗಳಲ್ಲಿ ಹೆಚ್ಚಿನವು ನದಿ ಆಧಾರಿತವಾಗಿವೆ ಮತ್ತು ಜಲಾಶಯಗಳ ಮೇಲ್ಭಾಗದಿಂದ ನೀರನ್ನು ತೆಗೆದುಕೊಳ್ಳುವ ಮಟ್ಟಿಗೆ ಸಮರ್ಥನೀಯವಾಗಿವೆ. ಜಲಾಶಯಗಳ ತಗ್ಗುಪ್ರದೇಶಗಳಿಂದ ನೀರನ್ನು ತೆಗೆದುಕೊಳ್ಳುವ ಸಂದರ್ಭಗಳಲ್ಲಿ ಯೋಜನೆಗಳ ಜಲಮೂಲ ಬತ್ತಿ ಹೋಗುತ್ತಿರುವು ದರಿಂದಲೂ ತೊಂದರೆ ಎದುರಾಗಿದೆ. ತೊಂದರೆಗೀಡಾದ ಪ್ರದೇಶಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ನೀರು ಸರಬರಾಜು ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 2024-25ನೆ ಸಾಲಿಗೆ 20 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಖರ್ಗೆ ಮಾಹಿತಿ ನೀಡಿದರು.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ