ಬೆಂಗಳೂರು: ಪ್ರಜ್ವಲ್ ರೇವಣ್ಣಗೆ ಅಸಲಿ ಸಂಕಷ್ಟ ಶುರುವಾಗಿದೆ. ವಿದೇಶದಲ್ಲಿರುವ ಪ್ರಜ್ವಲ್ ಸೆರೆಗೆ ಎಸ್‌ಐಟಿ ಸರ್ಜಿಕಲ್ ಸ್ಟ್ರೈಕ್ ಆರಂಭಿಸಿದ್ದು,
ಇದೀಗಹೊಳೆನರಸೀಪುರ ಕೇಸ್‌ನಲ್ಲಿ(Prajwal Revanna Case) ಪ್ರಜ್ವಲ್ ಬಂಧನಕ್ಕೆ ಅರೆಸ್ಟ್ ವಾರಂಟ್ ಪಡೆದಿದೆ.
ಜತೆಗೆ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಕೂಡ ಕೋರ್ಟ್ ಅನುಮತಿ ನೀಡಿದೆ.
ನಗರದ 42ನೇ ಎಸಿಎಂಎಂ ಕೋರ್ಟ್, ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಹೊರಡಿಸಿದ್ದ ನೋಟಿಸ್‌ಗಳ ಬಗ್ಗೆ ಕೋರ್ಟ್ ಮಾಹಿತಿ ಕೇಳಿತ್ತು. ಈ ವೇಳೆ ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ನೀಡಿರುವ ಬಗ್ಗೆ ಮಾಹಿತಿ ನೀಡಿದ್ದ ಎಸ್‌ಐಟಿ,
ಬಂಧನಕ್ಕೆ ಚಾರ್ಜ್ ಶೀಟ್ ಅವಶ್ಯಕತೆ ಇಲ್ಲ ಎಂದು ಕೋರ್ಟ್‌ಗೆ ಮನವರಿಕೆ ಮಾಡಿತ್ತು. ಹೀಗಾಗಿ ಕೋರ್ಟ್ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.
Laxmi News 24×7