Breaking News

ಮುಂಡರಗಿ: ಬಿಸಿಲಿನಿಂದ ಬೆಂದಿದ್ದ ಜನಕ್ಕೆ ತಂಪೆರೆದ ವರುಣ

Spread the love

ಮುಂಡರಗಿ: ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಕೆಲವು ಭಾಗಗಳಲ್ಲಿ ಶನಿವಾರ ರಾತ್ರಿ ಹಾಗೂ ಭಾನುವಾರ ಸಂಜೆ ಸಾಧಾರಣ ಮಳೆ ಸುರಿಯಿತು. ಕಳೆದ ಹಲವು ದಿನಗಳಿಂದ ಮಳೆಗಾಗಿ ಹಂಬಲಿಸುತ್ತಿದ್ದ ಜನರ ಮುಖದಲ್ಲಿ ಸಾಧಾರಣವಾಗಿ ಸುರಿದ ಮಳೆಯು ಮಂದಹಾಸ ಮೂಡಿಸಿತು.

ಮುಂಡರಗಿ: ಬಿಸಿಲಿನಿಂದ ಬೆಂದಿದ್ದ ಜನಕ್ಕೆ ತಂಪೆರೆದ ವರುಣ

ಭಾನುವಾರ ಸಂಜೆ 4ಗಂಟೆಗೆ ಆರಂಭವಾದ ಮಳೆಯು ಸುಮಾರು ಮುಕ್ಕಾಲು ಗಂಟೆಗಳ ಕಾಲ ಸುರಿಯಿತು.

ಮಳೆಯ ರಭಸಕ್ಕೆ ಹೂತು ಹೋಗಿದ್ದ ಪಟ್ಟಣದ ಬಹುತೇಕ ಚರಂಡಿಗಳ ಹೂಳೆಲ್ಲಿ ಕಿತ್ತುಹೋಯಿತು. ಪಟ್ಟಣದ ಹೊರವಲಯದ ಖಾಲಿ ನಿವೇಶನಗಳು ಹಾಗೂ ಕಚ್ಚಾ ರಸ್ತೆಗಳು ಮಳೆ ನೀರಿನಿಂದ ಆವೃತ್ತಗೊಂಡವು.

ಶನಿವಾರ ರಾತ್ರಿ ಸುಮಾರು ಅರ್ಧ ಗಂಟೆಗೂ ಹೆಚ್ಚುಕಾಲ ಮಳೆ ಸುರಿಯಿತು. ಡಂಬಳ ಹೋಬಳಿಯ ಕೆಲವು ಗ್ರಾಮಗಳಲ್ಲಿ ಉತ್ತಮವಾಗಿ ಮಳೆ ಸುರಿದ ವರದಿಯಾಗಿದೆ. ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ರಸ್ತೆಗಳು ಮಳೆಯ ಕಾರಣದಿಂದ ಕೆಸರು ಗದ್ದೆಗಳಂತಾಗಿವೆ.

 


Spread the love

About Laxminews 24x7

Check Also

ಗೋಕಾಕ‌ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನೂತನವಾಗಿ ಪ್ರತಿಷ್ಠಾಪಿಸಿದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ನೂತನ ಪುತ್ಥಳಿ

Spread the love ಗೋಕಾಕ‌ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನೂತನವಾಗಿ ಪ್ರತಿಷ್ಠಾಪಿಸಿದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ