ಬೆಳಗಾವಿ: ಇಲ್ಲಿನ ಖಾಸಬಾಗದ ಉಪ್ಪಾರ ಗಲ್ಲಿಯಲ್ಲಿ ನಾಲ್ಕು ದಿನ ವೈಭವದಿಂದ ನಡೆದ ಬನಶಂಕರಿ ದೇವಸ್ಥಾನದ ಶತಮಾನೋತ್ಸವ ಕಾರ್ಯಕ್ರಮ ಭಾನುವಾರ ಸಂಪನ್ನಗೊಂಡಿತು.
ಜಾತ್ರೆಯ ಕೊನೆಯ ದಿನ ಬೆಳಿಗ್ಗೆ ಮಹಾಕುಂಭಾಭಿಷೇಕ, ದೀಪಾರಾಧನೆ, ಮಹಾಮಂಗಳಾರತಿ ಧಾರ್ಮಿಕ ಕಾರ್ಯಕ್ರಮ ನೆರವೇರಿದವು.
ಸಾವಿರಾರು ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಜಿಲ್ಲೆಯ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ಸರದಿ ಸಾಲಿನಲ್ಲಿ ನಿಂತು, ಬನಶಂಕರಿ ದೇವಿ ದರ್ಶನಾಶೀರ್ವಾದ ಪಡೆದುಕೊಂಡರು. ತಮ್ಮ ಇಷ್ಟಾರ್ಥ ಈಡೇರಿದ್ದರಿಂದ ಕೆಲವರು ದೇವಿಗೆ ಸೀರೆ, ಚಿನ್ನಾಭರಣ ಮತ್ತಿತರ ಕಾಣಿಕೆಗಳನ್ನು ಅರ್ಪಿಸಿ ಭಕ್ತಿ ಮೆರೆದರು. ಸರ್ವಧರ್ಮೀಯರು ಜಾತ್ರೆಯಲ್ಲಿ ಭಾಗವಹಿಸಿದ್ದು ಭಾವೈಕ್ಯತೆಗೆ ಸಾಕ್ಷಿಯಾಗಿತ್ತು.