ಬೆಳಗಾವಿ: ‘ಕರ್ನಾಟಕ, ಪಶ್ಚಿಮ ಬಂಗಾಳ ಸೇರಿದಂತೆ ದೇಶದ ವಿವಿಧೆಡೆ ಅಧಿಕಾರದಲ್ಲಿರುವ ಬಿಜೆಪಿ ಹೊರತಾದ ಪಕ್ಷಗಳು, ಮುಸ್ಲಿಂ ತುಷ್ಟೀಕರಣ ಮಾಡುತ್ತಿವೆ. ಹಾಗಾಗಿ ಎಲ್ಲ ರಾಜ್ಯಗಳಲ್ಲೂ ಹಿಂದೂಗಳ ರಕ್ಷಣೆ ಮಾಡುವ ಮತ್ತು ಹಿಂದುತ್ವ ಪ್ರತಿಪಾದಿಸುವ ಪಕ್ಷಗಳನ್ನು ಆಯ್ಕೆ ಮಾಡಬೇಕು’ ಎಂದು ವಿಶ್ವ ಹಿಂದೂ ಪರಿಷತ್ ಅಖಿಲ ಭಾರತೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ದಿಲೀಪ ಪರಾಂಡೆ ಹೇಳಿದರು.
ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್‌ನವರು ಮಾಡುತ್ತಿರುವ ಮುಸ್ಲಿಂ ತುಷ್ಟೀಕರಣದಿಂದ ಹಿಂದೂಗಳಿಗೆ ಅಪಾಯವಿದೆ. ಹಾಗಾಗಿ ಎಲ್ಲ ರಾಜ್ಯಗಳಲ್ಲೂ ಹಿಂದೂ ಪರವಾದ ಸರ್ಕಾರಗಳು ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳಬೇಕಿದೆ. ಹಿಂದೂಗಳ ಹಿತವೇ ದೇಶದ ಹಿತವಾಗಿದೆ’ ಎಂದರು.
‘ಈಗ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮತದಾನ ಮುಗಿದಿದೆ. ಆದರೆ, ಇನ್ನೂ ಹಲವು ರಾಜ್ಯಗಳಲ್ಲಿ ಚುನಾವಣೆ ಮತದಾನ ಪ್ರಕ್ರಿಯೆ ನಡೆಯಬೇಕಿದೆ. ಅಂಥ ಕಡೆಗಳಲ್ಲಿ ಹಿಂದೂ ಪರವಾಗಿರುವವರಿಗೆ ಮತ ಹಾಕಬೇಕು. ಹಿಂದೂ ವಿರೋಧಿಗಳು ಸಂಸತ್ತಿಗೆ ಹೋಗಬಾರದು’ ಎಂದು ತಿಳಿಸಿದರು