Breaking News

ಖಾನಾಪುರ: ಪ್ರವಾಸಿ ತಾಣವಾಗಲಿ ಸಣ್ಣಹೊಸೂರಿನ ದೊಡ್ಡ ಕೆರೆ, ಬರಗಾಲದಲ್ಲೂ ಜಲಪೂರಣ

Spread the love

ಖಾನಾಪುರ: ತಾಲ್ಲೂಕಿನ ಹಲವೆಡೆ ಮಳೆಯ ಕೊರತೆಯ ಪರಿಣಾಮ ಈ ಸಲದ ಬೇಸಿಗೆಯಲ್ಲಿ ಎಲ್ಲೆಡೆ ಜಲಕ್ಷಾಮ ತಲೆದೋರಿದೆ. ಪ್ರಾಣಿ- ಪಕ್ಷಿಗಳು, ಜಲಚರಗಳಿಗೂ ಕುಡಿಯುವ ನೀರಿನ ತೊಂದರೆ ಉದ್ಭವಿಸಿದೆ. ಆದರೆ ಪಟ್ಟಣದಿಂದ 8 ಕಿ.ಮೀ ದೂರದಲ್ಲಿರುವ ಸಣ್ಣ ಹೊಸೂರು ಗ್ರಾಮದ ವಿಶಾಲವಾದ ಕೆರೆ ನೀರಿನಿಂದ ತುಂಬಿ ಕಂಗೊಳಿಸುತ್ತಿದೆ.

ಖಾನಾಪುರ: ಪ್ರವಾಸಿ ತಾಣವಾಗಲಿ ಸಣ್ಣಹೊಸೂರಿನ ದೊಡ್ಡ ಕೆರೆ, ಬರಗಾಲದಲ್ಲೂ ಜಲಪೂರಣ

ಇದನ್ನು ಅಭಿವೃದ್ಧಿ ಪಡಿಸಿ ಪ್ರವಾಸಿ ತಾಣ ಮಾಡಬೇಕಾದ ಅವಶ್ಯಕತೆ ಇದೆ.

ಈ ಕೆರೆಯಲ್ಲಿ ನೀರಿನ ಸಂಗ್ರಹದ ಪರಿಣಾಮ ಅಂಚಿನಲ್ಲಿ ನೂರಾರು ಬಿಳಿ ಕೊಕ್ಕರೆ, ರಾಜಹಂಸ, ಪಾರಿವಾಳ, ಗಿಳಿ, ನವಿಲು, ಗುಬ್ಬಿಗಳು ಸೇರಿದಂತೆ ಸಾವಿರಾರು ಪಕ್ಷಿಗಳು ತಮ್ಮ ದಾಹ ನೀಗಿಸಿಕೊಳ್ಳುತ್ತಿವೆ. ಸಣ್ಣ ನೀರಾವರಿ ಇಲಾಖೆಯ ಅಧೀನದ 10 ಎಕರೆ ವ್ಯಾಪ್ತಿಯ ವಿಶಾಲ ಪ್ರದೇಶದಲ್ಲಿ ಹರಡಿಕೊಂಡಿರುವ ಈ ಕೆರೆ ಸಣ್ಣ ಹೊಸೂರು ಗ್ರಾಮದ ಪೂರ್ವ ದಿಕ್ಕಿನಲ್ಲಿ ಅರ್ಧ ಕಿ.ಮೀ ದೂರದಲ್ಲಿ ತೋಪಿನಕಟ್ಟಿ ರಸ್ತೆಯ ಮೇಲಿದೆ.

ಸಣ್ಣ ಹೊಸೂರು, ನಿಡಗಲ್, ಭಂಡರಗಾಳಿ, ತೋಪಿನಕಟ್ಟಿ ಗ್ರಾಮಗಳ ನೂರಾರು ಜಾನುವಾರುಗಳ ಪಾಲಿಗೆ, ಈಜು ಕಲಿಯಲು ಆಸಕ್ತ ಯುವಕ- ಯುವತಿಯರಿಗೆ ಈ ಕೆರೆ ಈಜುಕೊಳವಾಗಿದೆ. ನಿತ್ಯ ಕೆರೆಯ ತಿಳಿನೀರಿನ ಮೇಲೆ ಈಜಾಡುವ ರಾಜಹಂಸ ಹಾಗೂ ಕೊಕ್ಕರೆಗಳ ಅಂದವನ್ನು ನೋಡುವುದೇ ಕಣ್ಣಿಗೆ ಹಬ್ಬವಾಗಿದೆ.


Spread the love

About Laxminews 24x7

Check Also

ಖಾನಾಪುರ: ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು

Spread the love ಖಾನಾಪುರ: ಪಟ್ಟಣದ ಹೊರವಲಯದ ಬೆಳಗಾವಿ ರಸ್ತೆಯ ಮರೆಮ್ಮ ದೇವಾಲಯದ ಬಳಿ ಶುಕ್ರವಾರ ರಾತ್ರಿ ಲಾರಿ ಹಿಂದಿನ ಚಕ್ರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ