Breaking News

ಖಾಸಗಿ ಶಾಲೆಗಳ ಶುಲ್ಕದಲ್ಲಿ ಭಾರೀ ಏರಿಕೆ !

Spread the love

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆಯ ಏರಿಕೆಯ ನಡುವೆ ಇದೀಗ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಪೋಷಕರಿಗೆ ಬಿಗ್‌ ಶಾಕ್.‌ ಖಾಸಗಿ ಶಾಲೆಗಳ ಶುಲ್ಕ ಈ ಬಾರಿ 30ರಿಂದ 40ರಷ್ಟು ಶುಲ್ಕ ಏರಿಕೆಯಾಗಿದೆ.

ಖಾಸಗಿ ಶಾಲೆಗಳ ಆಡಳಿತ ಮಂಡಳಿ ಪ್ರತಿ ವರ್ಷ ಶುಲ್ಕ ಹೆಚ್ಚಳ ಮಾಡುತ್ತವೆ.ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಶಾಕ್‌ : ಖಾಸಗಿ ಶಾಲೆಗಳ ಶುಲ್ಕದಲ್ಲಿ ಭಾರೀ ಏರಿಕೆ !

ಈ ಬಾರಿ ಶೇ. 30ರಿಂದ 40ರಷ್ಟು ಶುಲ್ಕ ಏರಿಕೆ ಮಾಡಿವೆ. ಖಾಸಗಿ ಶಾಲೆಗಳು 2023-24ನೇ ಸಾಲಿನಿಂದ ಶುಲ್ಕವನ್ನು ಹೆಚ್ಚಳ ಮಾಡುತ್ತಿವೆ. ಹಿಂದಿನ ವರ್ಷಕ್ಕಿಂತ ಈ ವರ್ಷ 30 ರಿಂದ 40 ಪ್ರತಿಶತ ಶುಲ್ಕ ಹೆಚ್ಚಳ ಮಾಡಿದ ಕುರಿತು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಪ್ರತಿ ನೀರು, ಕರೆಂಟ್ ಬಿಲ್, ತೆರಿಗೆ ಹಾಗೂ ನೋಂದಣಿ ಶುಲ್ಕವನ್ನು ಏರಿಕೆ ಮಾಡುತ್ತಿದೆ. ಅಲ್ಲದೆ ಸರ್ಕಾರ ಪ್ರತಿ ವರ್ಷ ಅಧಿಕ ಶಾಲೆಗಳ ಆರಂಭಕ್ಕೆ ಅನುಮತಿ ನೀಡುತ್ತದೆ, ಶಾಲೆಗಳು ಹೆಚ್ಚಾದಂತೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಆದರೆ ಸರ್ಕಾರದ ತೆರಿಗೆಗಳು ಮಾತ್ರ ಕಡಿಮೆ ಇರುವುದಿಲ್ಲ. ಹೀಗಾಗಿ ಅನಿವಾರ್ಯವಾಗಿ ಶಾಲೆಗಳು ಪ್ರತಿ ವರ್ಷ ಶುಲ್ಕವನ್ನು ಏರಿಕೆ ಮಾಡಲು ಮುಂದಾಗುತ್ತಿವೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ