ಕುಡಚಿ ಪಟ್ಟಣದ ಸಮೀಪದಲ್ಲಿ ಇಂದು ಕೃಷ್ಣಾ ನದಿಯ ನೀರಿನ ಮಟ್ಟದ ಪರಿಶೀಲನೆಯನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಸಿಎಂ ಶ್ರೀ ಸಿದ್ದರಾಮಯ್ಯನವರು ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಏಕನಾಥ ಶಿಂಧೆ ಅವರಿಗೆ ಪತ್ರ ಬರೆದಿದ್ದರು.ಕೃಷ್ಣಾ ನದಿಗೆ ಕೊಯ್ನಾ ಡ್ಯಾಮ್ ನಿಂದ ಶೀಘ್ರವೇ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ನೀರು ಬಿಡಲು ಒಪ್ಪಿಗೆ ನೀಡಿದ್ದಾರೆ.
ಕಳೆದ ಒಂದು ವಾರದಿಂದ ಮಳೆಯೂ ಸುರಿಯುತ್ತಿದ್ದು, ಕೊಯ್ನಾ ಜಲಾಶಯದಿಂದ ಮಹಾರಾಷ್ಟ್ರ ಸರ್ಕಾರ ನೀರು ಬಿಟ್ಟ ನಂತರ ಸಾರ್ವಜನಿಕರು ನೀರನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ಎಂದು ಮನವಿ ಮಾಡುತ್ತೇವೆ ಎಂದರು.
#SatishJarkiholi