ಹುಬ್ಬಳ್ಳಿ: ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತೊಬ್ಬ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ.
ಅಂಜಲಿ ಮತ್ತು ನೇಹಾ ಹತ್ಯೆ ಸೇರಿದಂತೆ ವಿವಿಧ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆ, ದಕ್ಷಿಣ ಉಪ ವಿಭಾಗದ ಎಸಿಪಿ ವಿಜಯ್ ಕುಮಾರ್ ತಳವಾರ್ ಅವರನ್ನು ಅಮಾನತು ಮಾಡಲಾಗಿದೆ.
ಹುಬ್ಬಳ್ಳಿಯಲ್ಲಿಂದು ಗೃಹಸಚಿವ ಜಿ.ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ್ದ ಅವರು, ಯಾರೇ ತಪ್ಪು ಮಾಡಿದ್ದರೂ ಯಾವುದೇ ಜಾತಿ ಮತ ನೋಡದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದರು.
ಸುದ್ದಿಗೋಷ್ಠಿ ಮುಗಿದ ತಕ್ಷಣವೇ, ಮಾಹಿತಿ ಪಡೆದಿರುವ ಪರಮೇಶ್ವರ್, ಎಸಿಪಿ ವಿಜಯ್ ಕುಮಾರ್ ಅವರನ್ನು ಅಮಾನತು ಮಾಡಿದೆ.