ಬೆಳಗಾವಿ: ಕೊಯ್ನಾ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಒಪ್ಪಿಗೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪತ್ರ ಬರೆದಿದ್ದರು.ಇದಾದ ಕೆಲವೇ ದಿನಗಳಲ್ಲಿ ಕರ್ನಾಟಕಕ್ಕೆ ನೀರು ಬಿಡಲು ಶಿಂಧೆ ಸಮ್ಮತಿ ನೀಡಿದ್ದಾರೆ.
ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಶೀಘ್ರದಲ್ಲೇ ಕೃಷ್ಣಾ ನದಿಗೆ ನೀರು ಬಿಡಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇದಲ್ಲದೆ, ಸೋಮವಾರ ರಾಯಬಾಗ ತಾಲೂಕಿಗೆ ಭೇಟಿ ನೀಡಿದ ಅವರು ಕೃಷ್ಣಾ ನದಿಯ ಮಟ್ಟವನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ ರಾಜ್ಯ ಸರ್ಕಾರ ಎಲ್ಲಾ ಬರಪೀಡಿತ ಪ್ರದೇಶಗಳಿಗೆ ಪರಿಣಾಮಕಾರಿಯಾಗಿ ನೀರು ಸರಬರಾಜು ಮಾಡಲು ಸಾಧ್ಯವಿರುವ ಎಲ್ಲ ಕೆಲಸ ಮಾಡುತ್ತಿದೆ. ಕೊಯ್ನಾ ಅಣೆಕಟ್ಟಿನಿಂದ ರಾಜ್ಯಕ್ಕೆ ನೀರು ಬಿಡಲು ಸಿದ್ದರಾಮಯ್ಯ ಅವರು ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
Laxmi News 24×7