Breaking News

ಸಹೋದರಿ ಮೇಲೆಯೇ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಅಣ್ಣಂದಿರಿಬ್ಬರು ಅರೆಸ್ಟ್

Spread the love

ತಮ್ಮ 14 ವರ್ಷದ ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಸಹೋದರರನ್ನು ಉತ್ತರಪ್ರದೇಶದ ಗಾಜೀಯಾಬಾದ್ ಪೊಲೀಸರು ಬಂಧಿಸಿದ್ದಾರೆ. ತಿಲಾ ಮೋರ್ಹ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಭಾನುವಾರ ಸಹೋದರರನ್ನು ಬಂಧಿಸಲಾಗಿದೆ.

SHOCKING: ಸಹೋದರಿ ಮೇಲೆಯೇ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಅಣ್ಣಂದಿರಿಬ್ಬರು ಅರೆಸ್ಟ್

ದೂರಿನ ಪ್ರಕಾರ ಇಬ್ಬರು ಸಹೋದರರು ತಮ್ಮ ಸಹೋದರಿ 8 ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾರೆ. ಕಳೆದ ಒಂದು ವರ್ಷದಿಂದ ಆಕೆಯನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದು, ಈ ಕಾರಣದಿಂದ ಆಕೆ ಗರ್ಭಿಣಿಯಾಗಿದ್ದಳು. ಶನಿವಾರ ಅಪ್ರಾಪ್ತ ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಆಕೆಯ ತಾಯಿ ಆಕೆಯನ್ನು ಅಲ್ಟ್ರಾಸೌಂಡ್‌ಗಾಗಿ ದೆಹಲಿಯ ಡಯಾಗ್ನೋಸ್ಟಿಕ್ ಸೆಂಟರ್‌ಗೆ ಕರೆದೊಯ್ದರು, ಅದರಲ್ಲಿ ಅವಳು 22 ವಾರಗಳ ಗರ್ಭಿಣಿ ಎಂದು ದೃಢಪಡಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಒಬ್ಬ ಆರೋಪಿಗೆ 20 ವರ್ಷ, ಇನ್ನೊಬ್ಬನಿಗೆ 23 ವರ್ಷವಾಗಿದೆ. ಶಾಲಿಮಾರ್ ಗಾರ್ಡನ್‌ನ ಸಹಾಯಕ ಪೊಲೀಸ್ ಕಮಿಷನರ್(ಎಸಿಪಿ) ಸಿದ್ಧಾರ್ಥ್ ಗೌತಮ್ ಮಾತನಾಡಿ, ತಾಯಿ ಇಲ್ಲದಿದ್ದಾಗ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗುತ್ತಿದ್ದರು. ಅತ್ಯಾಚಾರದ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳಿಬ್ಬರೂ ಬೆದರಿಕೆ ಹಾಕಿದ್ದರು. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ