Breaking News

ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Spread the love

ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಸಹ ಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಮಹಿಳೆಯೊಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಅಥಣಿಯಲ್ಲಿ ನಡೆದಿದೆ.

ಸ್ಪೋಟದಿಂದ ಗಂಭೀರವಾಗಿ ಗಾಯಗೊಂಡ ಶೋಭಾ ತೇಲಿ ಎಂಬವರು ಸಾವನ್ನಪ್ಪಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಅಸುನೀಗಿದ್ದಾರೆ. ಇಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿರುವ ಪ್ರಿಯಾ ಎಕ್ಸ್‌ಪೋರ್ಟ್ ಕೈಗಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟವಾಗಿದೆ.Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

ಬ್ಲಾಸ್ಟ್ ತೀವ್ರತೆಗೆ ಕಾರ್ಖಾನೆಯ ಗೋಡೆ ನಜ್ಜುಗುಜ್ಜಾಗಿದೆ. ಕೆಲ ಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಗಾಯಾಳುಗಳನ್ನು ಅಥಣಿ ಹಾಗೂ ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಿಯಾ ಎಕ್ಸ್‌ಪೋರ್ಟ್ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಸಾಂಗಲಿ ಉದ್ಯಮಿಯೊಬ್ಬರ ಸಹಭಾಗಿತ್ವ ಕಾರ್ಖಾನೆಯಾಗಿದ್ದು, ಮೆಕ್ಕೆಜೋಳ ಪಾಲಿಷ್ ಮಾಡಿ ಎಕ್ಸ್‌ಪೋರ್ಟ್ ಮಾಡುತ್ತದೆ. ಹೈ ಪ್ರೆಶರ್ ದಿಂದ ಬಾಯ್ಲರ್ ಸ್ಪೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ