Breaking News

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

Spread the love

ಬೆಂಗಳೂರು: ಚುನಾವಣೆಯಲ್ಲಿ ಸೋತ ಘಟಾನುಘಟಿಗಳೂ ಸೇರಿ ಪ್ರಭಾವಿಗಳು ಮೇಲ್ಮನೆ ಪ್ರವೇಶಕ್ಕೆ ನಡೆಸುತ್ತಿರುವ ಲಾಬಿ ಬಿಜೆಪಿ ನಾಯಕರಿಗೆ ತಲೆಬಿಸಿ ಸೃಷ್ಟಿಸಿದ್ದು, ಮೂರು ಸ್ಥಾನಕ್ಕಾಗಿ ಮೂವತ್ತಕ್ಕೂ ಹೆಚ್ಚು ಜನರು ಆಕಾಂಕ್ಷಿಗಳಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಸಂಭಾವ್ಯರ ಪಟ್ಟಿಯನ್ನು ದೆಹಲಿಗೆ ಕಳುಹಿಸುವುದಕ್ಕಾಗಿ ಬುಧವಾರ ಬಿಜೆಪಿಯ ಪ್ರಮುಖರ ಸಭೆ ನಡೆಯಲಿದ್ದು, ಆಕಾಂಕ್ಷಿಗಳೆಲ್ಲರ ಹೆಸರನ್ನು ದಿಲ್ಲಿ ವರಿಷ್ಠರಿಗೆ ಕಳುಹಿಸಲು ನಿರ್ಧರಿಸಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌, ರಾಜ್ಯ ಸಂಘಟನ ಪ್ರಧಾನ ಕಾರ್ಯದರ್ಶಿ ರಾಜೇಶ್‌ ನೇತೃತ್ವದಲ್ಲಿ ಪಕ್ಷದ ಪ್ರಮುಖರ ಸಭೆಯಲ್ಲಿ ಸಂಭಾವ್ಯರ ಪಟ್ಟಿ ತಯಾರಿಸಲಾಗುತ್ತದೆ. ಮುರುಗೇಶ್‌ ನಿರಾಣಿ, ಮಾಧುಸ್ವಾಮಿ, ಸಿ.ಟಿ. ರವಿ, ನಳಿನ್‌ ಕುಮಾರ್‌ ಕಟೀಲು ಅವರನ್ನೂ ಒಳಗೊಂಡಂತೆ ಮಾಜಿ ಶಾಸಕರು ಹಾಗೂ ಸಂಸದರು ವಿಧಾನ ಪರಿಷತ್ತಿಗೆ ಆಕಾಂಕ್ಷಿಗಳಾಗಿದ್ದಾರೆ.

ಯಾರಿಗೆ ಅವಕಾಶ ನೀಡಿದರೂ ಉಳಿದವರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಹೊಣೆಗಾರಿಕೆಯನ್ನು ಹೈಕಮಾಂಡ್‌ಗೆ ವರ್ಗಾಯಿಸಲು ನಿರ್ಧರಿಸಲಾಗಿದೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ