Breaking News
Home / Uncategorized / ಡಿಸಿಎಂ DK ಶಿವಕುಮಾರ್‌ ಮನೆಯಿಂದಲೇ ʻಪೆನ್‌ ಡ್ರೈವ್‌ʼ ವರ್ಗಾವಣೆ ಆಗಿದೆ : ಮಾಜಿ ಸಿಎಂ ʻHDKʼ ಹೊಸ ಬಾಂಬ್‌

ಡಿಸಿಎಂ DK ಶಿವಕುಮಾರ್‌ ಮನೆಯಿಂದಲೇ ʻಪೆನ್‌ ಡ್ರೈವ್‌ʼ ವರ್ಗಾವಣೆ ಆಗಿದೆ : ಮಾಜಿ ಸಿಎಂ ʻHDKʼ ಹೊಸ ಬಾಂಬ್‌

Spread the love

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲೇ ಪೆನ್ ಡ್ರೈವ್ ಟ್ರಾನ್ಸ್ ಫರ್ ನಡೆದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸರಿಯಾದ ತನಿಖೆ ನಡೆಸದೇ ಇದ್ರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ.

ಪೆನ್‌ ಡ್ರೈವ್‌ ಪ್ರಕರಣದಲ್ಲಿ ಡಿಕೆ ಬ್ರದರ್ಸ್ ಕೈವಾಡ ಇದೆ. ಹಾಸನದ ಕಾಂಗ್ರೆಸ್ ಅಭ್ಯರ್ಥಿ ಹೊಳೆನರಸೀಪುರದಲ್ಲಿ ಒಬ್ಬ ವ್ಯಕ್ತಿಯನ್ನು ಕರೆದುಕೊಂಡು ಡಿ.ಕೆ.ಸುರೇಶ್, ಡಿಕೆ ಶಿವಕುಮಾರ್ ಬಳಿ ಹೋಗಿದ್ದಾನೆ. ಈ ವೇಳೆಯೇ ಡಿ.ಕೆ. ಶಿವಕುಮಾರ್‌ ಮನೆಯಲ್ಲೇ ಪೆನ್‌ ಡ್ರೈವ್‌ ಟ್ರಾನ್ಸ್‌ ಫರ್‌ ನಡೆದಿದೆ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

ನಾನು ಪ್ರಜ್ವಲ್ ಪರವಾಗಿ ಇಲ್ಲ. ಆತನ ಅಪರಾಧ ಸಾಬೀತಾದರೆ ಶಿಕ್ಷೆ ಕೊಡಿ. ಈ ಬಗ್ಗೆ ಪಾರದರ್ಶಕವಾಗಿ ತನಿಖೆ ನಡೆಸಿ. ದೇವರಾಜೇಗೌಡ, ಶಿವರಾಮೇಗೌಡ, ಡಿಕೆ ಶಿವಕುಮಾರ್ ಪೆನ್ ಡ್ರೈವ್ ವಿತರಣೆ ಹಿಂದೆ ಇದ್ದಾರೆ.
ಪೆನ್‌ ಡ್ರೈವ್‌ ಪ್ರಕರಣದಲ್ಲಿ ಡಿಕೆ ಬ್ರದರ್ಸ್ ಕೈವಾಡ ಇದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ನಟ ದರ್ಶನ್ & ಗ್ಯಾಂಗ್ ನಿಂದ 10 ಮೊಬೈಲ್ , 30 ಲಕ್ಷ ಹಣ ಜಪ್ತಿ..!

Spread the love ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ 10 ಮೊಬೈಲ್ , 30 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ