ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 30ಕ್ಕೆ ಹಾಸನ ಚಲೋ ಹೋರಾಟ ನಡೆಸಲು ನಿರ್ಧರಿಸಲಾಗಿದೆ. ಕರ್ನಾಟಕ ರಾಜ್ಯ ಜನಪರ ಚಳುವಳಿಗಳ ಒಕ್ಕೂಟದಿಂದ ಈ ಹೋರಾಟ ನಡೆಯಲಿದೆ.
ಮಹಿಳೆಯರ ಘನತೆ ಉಳಿಸಿ ಹಾಸನ ಗೌರವ ಕಾಪಾಡಿ ಎಂಬ ಸ್ಲೋಗನ್ನ್ನೊಂದಿಗೆ ಬೃಹತ್ ಹೋರಾಟ ನಡೆಯಲಿದೆ.
ಇದಕ್ಕೆ ಸಂಬಂಧಿಸಿದಂತೆ ಪೋಸ್ಟರ್ಗಳನ್ನೂ ಬಿಡುಗಡೆ ಮಾಡಲಾಗಿದೆ. ಸಂಘಟನೆಯ ಮುಖಂಡ ದರ್ಮೇಶ್ ಇಂದು ಹಾಸನ ಚಲೋ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದರು. ಮೇ 30ಕ್ಕೆ ಬೃಹತ್ ಹೋರಾಟ ನಡೆಯಲಿದೆ. ಇದರಲ್ಲಿ ಅನೇಕ ಹೋರಾಟಗಾರರು, ಸಾಹಿತಿಗಳು, ಚಿಂತಕರು ಹಾಗೂ ಪ್ರಗತಿಪರರು ಸೇರಿ ಸಹಸ್ರಾರು ಜನರು ಭಾಗಿಯಾಗಲಿದ್ದಾರೆ ಎಂದರು.