Breaking News
Home / Uncategorized / ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆಗೆ ಬ್ರೇಕ್; ವಿಶೇಷ ತಂಡ ಕಾರ್ಯಾಚರಣೆ

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆಗೆ ಬ್ರೇಕ್; ವಿಶೇಷ ತಂಡ ಕಾರ್ಯಾಚರಣೆ

Spread the love

ಬೆಂಗಳೂರು, ಮೇ.25: ರಾಜ್ಯದಲ್ಲಿ ಕೇಂದ್ರ ಹಾಗೂ ಸರ್ಕಾರದ ವಾಹನಗಳಿಗೆ (Government Vehicles) ಮಾತ್ರ ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಹಾಗೂ ಚಿಹ್ನೆ ಬಳಸಲು ಅವಕಾಶವಿದೆ. ಆದರೆ ಬೆಂಗಳೂರಲ್ಲಿ ಸರ್ಕಾರದ ಅಧೀನದ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರದ ಲಾಂಛನ, ಚಿಹ್ನೆಗಳನ್ನು ಅಳವಡಿಸಿರುವುದು ಕಂಡುಬರುತ್ತಿದೆ.

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆಗೆ ಬ್ರೇಕ್; ವಿಶೇಷ ತಂಡ ಕಾರ್ಯಾಚರಣೆ

ಈಗಾಗಲೇ ಸಾರಿಗೆ ಇಲಾಖೆಯಲ್ಲಿ (Transport Department) ಈ ಬಗ್ಗೆ ನೂರಾರು ಪ್ರಕರಣಗಳು ದಾಖಲಾಗಿವೆ. ಇಂತಹ ನೋಂದಣಿ ಫಲಕಗಳನ್ನು ತೆರವುಗೊಳಿಸಲು ರಾಜ್ಯ ಸಾರಿಗೆ ಇಲಾಖೆ ಏಳು ವಿಶೇಷ ತನಿಖಾ ತಂಡಗಳನ್ನು ರಚಿಸಿ, ಜೂನ್ ಒಂದರಿಂದ ಕಾರ್ಯಾಚರಣೆಗೊಳಿಸಲು ಪ್ಲಾನ್ ಮಾಡಿದೆ. ಮೊದಲಿಗೆ 500, ಎರಡನೇ ಬಾರಿ ಒಂದು ಸಾವಿರ ರೂಪಾಯಿ ಅದಾದ ನಂತರ ವಾಹನವನ್ನು ಸೀಜ್ ಮಾಡಲಾಗುತ್ತದೆ.

ಸಾರಿಗೆ ಇಲಾಖೆಯ ನಿಯಮದಂತೆ, ಕೇವಲ ಸರ್ಕಾರಿ ವಾಹನಗಳಿಗೆ ಅಂದರೇ ಜಿ ಸಿರೀಸ್ ಇರೋ ನಂಬರ್ ಪ್ಲೇಟ್ ಇರೋ ವಾಹನಗಳಲ್ಲಿ ಮಾತ್ರ ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಇರಬೇಕು. ಅದನ್ನು ಹೊರತು ಪಡಿಸಿ, ಸರ್ಕಾರದ ಅಧೀನದಲ್ಲಿ ಬರೋ ಸರ್ಕಾರಿ ನಿಗಮ, ಮಂಡಳಿ, ಸಂಸ್ಥೆ, ಲೋಕಲ್ ಬಾಡಿ, ಮುನ್ಸಿಪಲ್ ವಾಹನಗಳಲ್ಲಿಯೂ ಸರ್ಕಾರದ ಲಾಂಛನ ಬಳಕೆಗೆ ಅವಕಾಶವಿಲ್ಲ‌.

ಉದಾಹರಣೆಗೆ ಕೆಎಸ್​ಆರ್​ಟಿಸಿ ನಿಗಮವಾದ್ರೂ ಅಧಿಕಾರಿಗಳು ಸರ್ಕಾರದ ಚಿಹ್ನೆ, ಹೆಸರು ಬಳಸುವಂತಿಲ್ಲ. ಅನಧಿಕೃತವಾದ ಲಾಂಛನ ಅಥವಾ ಚಿಹ್ನೆ ಹೊಂದಿರುವ ವಾಹನಗಳ ವಿರುದ್ಧ ಮೋಟಾರು ವಾಹನಗಳ ಕಾಯ್ದೆಯಡಿ ಕ್ರಮ ಕೈಗೊಂಡು, ಕೇಸ್ ದಾಖಲಿಸಲಿಸುವ ಎಚ್ಚರಿಕೆಯನ್ನು ಸಾರಿಗೆ ಇಲಾಖೆ ನೀಡಿದೆ.


Spread the love

About Laxminews 24x7

Check Also

ಕರ್ನಾಟಕದ ಎರಡನೇ ರಾಜಧಾನಿಯಾಗಲಿಬೆಳಗಾವಿ

Spread the love ಬೆಳಗಾವಿ: ನಗರದ ಎಸ್‌. ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ತಾಯಿ ಭುವನೇಶ್ವರಿ, ಚಾಲುಕ್ಯ ಚಕ್ರವರ್ತಿ ಇಮ್ಮಡಿ ಪುಲಕೇಶಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ