Breaking News

ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ, 11 ಪೊಲೀಸರಿಗೆ ಗಾಯ

Spread the love

ದಾವಣಗೆರೆ, ಮೇ 25: ಲಾಕಪ್‌ಡೆತ್‌ (LockupDeath) ​​ಅಂತ ಆರೋಪಿಸಿ ಮೃತನ ಸಂಬಂಧಿಕರು ಚನ್ನಗಿರಿ ಪೊಲೀಸ್​ ಠಾಣೆ (Channagiri Police Station) ಮೇಲೆ ಶುಕ್ರವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ 11 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 10ಕ್ಕೂ ಹೆಚ್ಚು ಪೊಲೀಸ್ ವ್ಯಾನ್​ಗಳು ಜಖಂ‌ಗೊಂಡಿವೆ.

ಪ್ರಕರಣ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಉಮಾ ಪ್ರಶಾಂತ ಮಾತನಾಡಿ, ಮೃತ ಆದಿಲ್​ನನ್ನು​ ಶುಕ್ರವಾರ ಪೊಲೀಸರು ಠಾಣೆಗೆ ಕರೆತಂದರು. ಬಳಿಕ ಆದಿಲ್​ ಠಾಣೆಯಲ್ಲಿ ಕುಸಿದು ಬೀಳುತ್ತಾರೆ. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಆದಿಲ್​ ಪೊಲೀಸ್ ಠಾಣೆಯಲ್ಲಿ 6-7 ನಿಮಿಷ ಕೂಡ ಇಲ್ಲ ಎಂದು ಹೇಳಿದರು.

ಆದರೂ ಕೂಡ ಮೃತನ ಸಂಬಂಧಿಕರು ಲಾಕಪ್‌ಡೆತ್‌ ಎಂದು ಹೇಳುತ್ತಿದ್ದಾರೆ. ನಮ್ಮಲ್ಲಿ ‌ಕೂಡ ಸಿಸಿ‌ಕ್ಯಾಮರಾ ಇದೆ. ಎಲ್ಲ ಪರಿಶೀಲನೆ ಮಾಡಲಾಗುತ್ತಿದೆ.‌ ಪ್ರಮಾಣಿಕ ತನಿಖೆ ಮಾಡುತ್ತೇವೆ. ಮೃತರ ತಂದೆ ದೂರು ಕೊಟ್ಟಿದ್ದಾರೆ. ತನಿಖೆ ಆಗುತ್ತದೆ.‌ ಈಗಾಗಲೇ ಶವನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.‌ ಗಂಭೀರ ಪ್ರಕರಣ ಆದ ಹಿನ್ನೆಲೆ ನ್ಯಾಯಾಧೀಶರ ಸಮ್ಮುಖದಲ್ಲಿ ಶವ ಪರೀಕ್ಷೆ ಮಾಡಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ಕು‌ ಪ್ರಕರಣ ದಾಖಲಾಗಿವೆ. ಕಲ್ಲು ತೂರಾಟದಲ್ಲಿ 7 ಪೊಲೀಸ್ ವಾಹನ ಹಾಗೂ 11 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ‌ ನಿಯಂತ್ರಣದಲ್ಲಿದೆ ಎಂದು ತಿಳಿಸಿದರು.

ಏನಿದು ಪ್ರಕರಣ

ಒಸಿ (ಮಟ್ಕಾ) ಆಡಿಸುತ್ತಿದ್ದ ಹಿನ್ನಲೆ ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಆದಿಲ್ (30) ಎನ್ನುವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು, ಸಂಜೆ ಪೊಲೀಸ್ ಠಾಣೆಗೆ ಕರೆತಂದಿದ್ದರು. ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಬಿದ್ದ ಆದಿಲ್‌ ಠಾಣೆಯಲ್ಲಿ ಕುಸಿದು ಬಿದ್ದಿದ್ದಾನೆ. ಕೂಡಲೆ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ಸಾವನ್ನಪ್ಪಿದ್ದಾನೆ. ಆದಿಲ್‌ ಸಾವಿಗೆ ಪೊಲೀಸರೇ ಕಾರಣ ಎಂದು ಸಂಬಂಧಿಕರು ಆಕ್ರೋಶಗೊಂಡು ಪೊಲೀಸ್​ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರು.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ