ಖಾನಾಪುರ: ಸಾಮಾನ್ಯವಾಗಿ ಬೇಸಿಗೆಯಲ್ಲಿ ಹಳ್ಳ-ಕೊಳ್ಳಗಳು, ಕೆರೆ-ಕಟ್ಟೆಗಳು ಮತ್ತು ನದಿ ಮತ್ತಿತರ ಜಲಮೂಲಗಳಲ್ಲಿ ನೀರಿನ ಹರಿವು ಮತ್ತು ಪ್ರಮಾಣ ಕ್ಷೀಣಿಸುವುದು ವಾಡಿಕೆ.
ಆದರೆ ತಾಲ್ಲೂಕಿನ ಲೋಂಡಾ ಅರಣ್ಯ ವಲಯದ ಕರಂಜಾಳ ಗ್ರಾಮ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಹತ್ತು ವರ್ಷಗಳ ಹಿಂದೆ ಅರಣ್ಯ ಇಲಾಖೆಯವರು ನಿರ್ಮಿಸಿದ ಕೆರೆಯಲ್ಲಿ
ಈ ವರ್ಷದ ಕಡು ಬೇಸಿಗೆಯಲ್ಲೂ ಅವಶ್ಯ ಪ್ರಮಾಣದಲ್ಲಿ ನೀರಿನ ಸಂಗ್ರಹವಿದೆ.