ಬೆಂಗಳೂರು,ನ.21- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇನ್ನು ಎರಡು ಮೂರು ದಿನಗಳಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಪೊಲೀಸ್ ಪದಕ ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೆರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆಯೋ ಇಲ್ಲವೇ ಪುನಾರಚನೆಯೋ ಎಂಬುದು ತಿಳಿಯಲಿದೆ ಎಂದು ಹೇಳಿದರು.
ಈ ಬಾರಿ ಸಂಪುಟ ಪುನಾರಚನೆಯೋ ಅಥವಾ ವಿಸ್ತರಣೆಯೋ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಎರಡರಲ್ಲಿ ಒಂದಂತೂ ಖಚಿತ. ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸದ್ಯದಲ್ಲಿ ನಿಗದಿಪಡಿಸಲಾಗುವುದು ಎಂದರು. ಯಾವ ಯಾವ ಸಚಿವರು ಸಂಪುಟಕ್ಕೆ ಸೇರ್ಪಡೆ ಮಾಡಬೇಕು, ಯಾರನ್ನು ತೆಗೆದುಕೊಳ್ಳಬೇಕು, ಇನ್ಯಾರನ್ನು ಕೈಬಿಡಬೇಕು ಎಂಬುದು ರಾಷ್ಟ್ರ ನಾಯಕರು ನಿರ್ಧರಿಸುತ್ತಾರೆ. ಎರಡಮೂರು ದಿನದೊಳಗೆ ಈ ಗೊಂದಲಕ್ಕೆ ತೆರೆ ಬೀಳಲಿದೆ ಎಂದು ಸ್ಪಷ್ಟಪಡಿಸಿದರು.
Laxmi News 24×7