Breaking News

ಸರ್ಕಾರಕ್ಕೆ ಚಾಟಿ ಬೀಸಿದ ಪ್ರಲ್ಹಾದ್​ ಜೋಶಿ

Spread the love

ಹುಬ್ಬಳ್ಳಿ, ಮೇ 25: ದಾವಣಗೆರೆ ಜಿಲ್ಲೆಯ ಚನ್ನಗಿರಿ (Channagiri) ಠಾಣೆ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ಮೇಲೆ ಕಲ್ಲು ತೂರಿದ್ದ 10 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಉಳಿದವರಿಗಾಗಿ ಶೋಧ ಮುಂದುವರೆಸಿದ್ದಾರೆ. ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi), ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಹೋದವರ ಮೇಲೆ ಕ್ರಮಕೈಗೊಂಡಿಲ್ಲ ಅದನ್ನು ಬಿಟ್ಟು ಸರ್ಕಲ್ ಇನ್​ಸ್ಪಕ್ಟರ್​ ಮತ್ತು ಡಿವೈಎಸ್​ಪಿಯನ್ನು ಅಮಾನತು ಮಾಡಲಾಗಿದೆ.

ಅಂಜಲಿ, ನೇಹಾ ಹಿರೇಮಠ ಪ್ರಕರಣದಲ್ಲಿ ಸಿದ್ದರಾಮಯ್ಯರವರು ಪೊಲೀಸರ ಮೇಲೆ ಕ್ರಮ ತೆಗೆದುಕೊಂಡಿಲ್ಲ. ಆದರೆ ಈ ಪ್ರಕರಣದಲ್ಲಿ ಪೊಲೀಸರ ಮೇಲೆ ಕ್ರಮ ಏಕೆ? ನೀವು ಎಷ್ಟು ತುಷ್ಟೀಕರಣದ ರಾಜಕೀಯ ಮಾಡಿತ್ತಿದ್ದಿರಿ.

ನಿಮ್ಮ ಈ ತುಷ್ಟೀಕರಣ ರಾಜಕೀಯ ಅರಾಜಕತೆ ಸೃಷ್ಟಿ ಆಗುತ್ತದೆ. ಅಲ್ಪ ಸಂಖ್ಯಾತರು ಗಲಭೆ ಮಾಡಿದರೆ ಯಾಕೆ ಖಂಡನೆ ಮಾಡೋದಿಲ್ಲ.

ಯಾರೇ ಗಲಭೆ ಮಾಡಿದ್ರೂ ತಪ್ಪು ಅದನ್ನು ಖಂಡಿಸಿ. ಈ ವಿಚಾರದಲ್ಲಿ ಪೊಲೀಸ್ ನೈತಿಕತೆ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರಿಂದಾಗಿ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಪೊಲೀಸರು ಠಾಣೆ ಬಿಟ್ಟು ಓಡಿಹೋಗತ್ತಾರೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ