IPL 2024: ಐಪಿಎಲ್ ಸೀಸನ್ 17ರ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ರನ್ ಸುರಿಮಳೆಯಾಗುವ ಸಾಧ್ಯತೆಯಿದೆ.
ಏಕೆಂದರೆ ಫೈನಲ್ ಪಂದ್ಯಕ್ಕಾಗಿ ಬ್ಯಾಟಿಂಗ್ಗೆ ಸಹಕಾರಿಯಾಗುವಂತಹ ಪಿಚ್ ಅನ್ನು ಸಿದ್ಧಪಡಿಸುತ್ತಿರುವುದಾಗಿ ಎಂಎ ಚಿದಂಬರಂ ಮೈದಾನದ ಕ್ಯುರೇಟರ್ ತಿಳಿಸಿರುವುದಾಗಿ ಐಪಿಎಲ್ ವೀಕ್ಷಕ ವಿವರಣೆಗಾರ ಕೆವಿನ್ ಪೀಟರ್ಸನ್ ಹೇಳಿದ್ದಾರೆ. ಹೀಗಾಗಿ ಅಂತಿಮ ಹಣಾಹಣಿಯಲ್ಲಿ ಬೃಹತ್ ಮೊತ್ತವನ್ನು ನಿರೀಕ್ಷಿಸಬಹುದು.ಫೈನಲ್ ಪಂದ್ಯಕ್ಕಾಗಿ ನಾವು ಮುಂಬೈನ ವಾಂಖೆಡೆ ಸ್ಟೇಡಿಯಂ ಮಾದರಿಯಲ್ಲಿ ಕೆಂಪು ಮಣ್ಣಿನ ಪಿಚ್ ಅನ್ನು ಸಿದ್ಧಪಡಿಸುತ್ತಿದ್ದೇವೆ ಎಂದು ಕ್ಯುರೇಟರ್ ಹೇಳಿದ್ದಾರೆ.
ಎಲ್ಲರಿಗೂ ಗೊತ್ತಿರುವಂತೆ ಮುಂಬೈ ಪಿಚ್ ಬ್ಯಾಟಿಂಗ್ಗೆ ಸಹಕಾರಿ. ಹೀಗಾಗಿ ಐಪಿಎಲ್ನ ಫೈನಲ್ ಪಂದ್ಯದಲ್ಲೂ ಬ್ಯಾಟ್ಸ್ಮನ್ಗಳ ಅಬ್ಬರನ್ನು ನಿರೀಕ್ಷಿಸಬಹುದು ಎಂದು ಪೀಟರ್ಸನ್ ಹೇಳಿದ್ದಾರೆ.ಇದಕ್ಕೂ ಮುನ್ನ ಇದೇ ಮೈದಾನದಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಬೌಲರ್ಗಳು ಮೇಲುಗೈ ಸಾಧಿಸಿದ್ದರು.
ಬಲಿಷ್ಠ ಬ್ಯಾಟಿಂಗ್ ಲೈನಪ್ ಹೊಂದಿದ್ದ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ರಾಜಸ್ಥಾನ್ ರಾಯಲ್ಸ್ ಬೌಲರ್ಗಳು ಕೇವಲ 175 ರನ್ಗಳಿಗೆ ಕಟ್ಟಿ ಹಾಕಿದ್ದರು. ಇದಾದ ಬಳಿಕ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಎಸ್ಆರ್ಹೆಚ್ ಬೌಲರ್ಗಳು ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇವಲ 139 ರನ್ಗಳಿಗೆ ನಿಯಂತ್ರಿಸಿ 36 ರನ್ಗಳ ಜಯ ಸಾಧಿಸಿದ್ದರು.
Laxmi News 24×7