ಬೆಂಗಳೂರು, ಮೇ 26: ನಟೋರಿಯಸ್ ಕೊಲೆಗಾರ ಗಿರೀಶ್ನನ್ನು ಬೆಂಗಳೂರಿನ (Bengaluru) ಬನಶಂಕರಿ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಆರೋಪಿ ಗಿರೀಶ್ ಒಂದೇ ವಾರದಲ್ಲಿ ಎರಡು ಕೊಲೆ ಮಾಡಿದ್ದನು. ಕುಡಿದು ಬಂದು ರಸ್ತೆ ಬದಿ ಮಲಗಿದ್ದವರನ್ನು ಆರೋಪಿ ಗಿರೀಶ್ ಕೊಲೆ ಮಾಡುತ್ತಿದ್ದನು.
ಕುಡಿದ ಮತ್ತಿನಲ್ಲಿ ಮೇ 12ರಂದು ಜಯನಗರ 7ನೇ ಬಡಾವಣೆಯಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದನು. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮತ್ತೆ ಮೇ 18ರಂದು ಸಿಟಿ ಮಾರ್ಕೆಟ್ ಹಿಂಭಾಗದ ಕಾಂಪ್ಲೆಕ್ಸ್ನಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದನು. ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಾಗಿ ಎರಡೂ ಠಾಣೆ ಪೊಲೀಸರು ಬಲೆ ಬೀಸಿದ್ದರು. ಇದೀಗ ಬನಶಂಕರಿ ಠಾಣೆ ಪೊಲೀಸರು ಆರೋಪಿ ಗಿರೀಶ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Laxmi News 24×7