Breaking News

ನಟೋರಿಯಸ್​ ಕೊಲೆಗಾರ ಗಿರೀಶ್​ನನ್ನು ಬೆಂಗಳೂರಿನಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ

Spread the love

ಬೆಂಗಳೂರು, ಮೇ 26: ನಟೋರಿಯಸ್​ ಕೊಲೆಗಾರ ಗಿರೀಶ್​ನನ್ನು ಬೆಂಗಳೂರಿನ (Bengaluru) ಬನಶಂಕರಿ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಆರೋಪಿ ಗಿರೀಶ್​​ ಒಂದೇ ವಾರದಲ್ಲಿ ಎರಡು ಕೊಲೆ ಮಾಡಿದ್ದನು. ಕುಡಿದು ಬಂದು ರಸ್ತೆ ಬದಿ ಮಲಗಿದ್ದವರನ್ನು ಆರೋಪಿ ಗಿರೀಶ್ ಕೊಲೆ ಮಾಡುತ್ತಿದ್ದನು.

ಕುಡಿದ ಮತ್ತಿನಲ್ಲಿ ಮೇ 12ರಂದು ಜಯನಗರ 7ನೇ ಬಡಾವಣೆಯಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದನು. ​ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಕುಡಿದು ಬಂದು ರಸ್ತೆ ಬದಿ ಮಲಗಿದ್ದವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಸಾಯಿಸುತ್ತಿದ್ದ ಕಿಲ್ಲರ್‌ ಅಂದರ್‌!

ಮತ್ತೆ ಮೇ 18ರಂದು ಸಿಟಿ ಮಾರ್ಕೆಟ್ ಹಿಂಭಾಗದ ಕಾಂಪ್ಲೆಕ್ಸ್​​ನಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದನು. ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಾಗಿ ಎರಡೂ ಠಾಣೆ ಪೊಲೀಸರು ಬಲೆ ಬೀಸಿದ್ದರು. ಇದೀಗ ಬನಶಂಕರಿ ಠಾಣೆ ಪೊಲೀಸರು ಆರೋಪಿ ಗಿರೀಶ್​ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


Spread the love

About Laxminews 24x7

Check Also

ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆ. 1ರಂದು 16ನೇ ಪದವಿ ಪ್ರದಾನ ಸಮಾರಂಭ

Spread the loveಬಾಗಲಕೋಟೆ: ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ 2024–25ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ೧೬ನೇ ಪದವಿ ಪ್ರದಾನ ಸಮಾರಂಭವನ್ನು ಆಗಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ