ನವದೆಹಲಿ: ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಮಕ್ಕಳ ಆಸ್ಪತ್ರೆಯಲ್ಲಿ ಕಳೆದ ತಡರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡು ಹತ್ತಿ ಉರಿದು ಕನಿಷ್ಠ 7 ನವಜಾತ ಶಿಶುಗಳು ಮೃತಪಟ್ಟಿವೆ. ನಿನ್ನೆ ರಾತ್ರಿ 11:30 ರ ಸುಮಾರಿಗೆ ‘ಬೇಬಿ ಕೇರ್ ನ್ಯೂ ಬಾರ್ನ್ ಆಸ್ಪತ್ರೆ’ ಮತ್ತು ಅದರ ಪಕ್ಕದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶಹದಾರದ ಕೃಷ್ಣ ನಗರದಲ್ಲಿನ ಬಹುಮಹಡಿ ವಸತಿ ಕಟ್ಟಡದಲ್ಲಿ ಮತ್ತೊಂದು ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಮೃತಪಟ್ಟಿದ್ದಾರೆ. ಅಧಿಕಾರಿಗಳ ಪ್ರಕಾರ, ಒಟ್ಟು 12 ಶಿಶುಗಳನ್ನು ರಕ್ಷಿಸಲಾಗಿದೆ, ಅವರಲ್ಲಿ 7 ಶಿಶುಗಳು ಮೃತಪಟ್ಟಿದ್ದು, ಐವರನ್ನು ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.