Breaking News

ಕೃಷ್ಣಾ ನದಿ ನೀರು ತಡೆದ ಮಹಾರಾಷ್ಟ್ರ: ಬ್ಯಾರೇಜ್​ ಸುತ್ತ ಪೊಲೀಸರ ನಿಯೋಜನೆ

Spread the love

ಚಿಕ್ಕೋಡಿ, ಮೇ 26: ಕೊಲ್ಹಾಪುರ  ಜಿಲ್ಲೆಯಲ್ಲಿರುವ ರಾಜಾಪುರ ಬ್ಯಾರೇಜ್  ಮೂಲಕ ಕರ್ನಾಟಕಕ್ಕೆ ಹರಿದು ಬರುತ್ತಿದ್ದ ಕೃಷ್ಣಾ ನದಿ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆಹಿಡಿದಿದೆ.

ಅಲ್ಲದೆ ಮಹಾರಾಷ್ಟ್ರ ಸರ್ಕಾರ ಬ್ಯಾರೇಜ್ ಬಳಿ ಪೊಲೀಸ್ ಇಲಾಖೆ ಹಾಗೂ ನೀರಾವರಿ ಇಲಾಖೆಯ ಇಬ್ಬರು ಸಿಬ್ಬಂದಿಯನ್ನು ನಿಯೋಜನೆ ಮಾಡಿದೆ.ಚಿಕ್ಕೋಡಿ: ಕೃಷ್ಣಾ ನದಿ ನೀರು ತಡೆದ ಮಹಾರಾಷ್ಟ್ರ: ಬ್ಯಾರೇಜ್​ ಸುತ್ತ ಪೊಲೀಸರ ನಿಯೋಜನೆ

ನಾಲ್ವರು ಸಿಬ್ಬಂದಿಯ ಎರಡು ತಂಡ ಬ್ಯಾರೇಜ್​ ಬಳಿ ನಿರಂತರವಾಗಿ ಗಸ್ತು ಹಾಕುತ್ತಿರುತ್ತದೆ.ಹೆಚ್ಚು ಪ್ರಮಾಣದಲ್ಲಿ ಮಳೆಯಾಗುತ್ತಿದ್ದರಿಂದ ಕೃಷ್ಣ ನದಿಗೆ ಒಡಲಿಗೆ ಹೆಚ್ಚು ನೀರು ಹರಿದು ಬರುತ್ತಿದೆ. ಹೀಗಾಗಿ ಈ ರಾಜಾಪುರ ಬ್ಯಾರೇಜ್ ಮೂಲಕ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗೆ ನೀರು ಹರಿದು ಬರುತ್ತಿತ್ತು. ಆದರೆ ಇದೀಗ ಮಹಾರಾಷ್ಟ್ರ ಸರ್ಕಾರ ನೀರು ತಡೆ ಹಿಡಿದಿದ್ದರಿಂದ ಜಿಲ್ಲೆಗಳಿಗೆ ನೀರು ಬರುವುದು ನಿಂತಿದೆ. ಇದರಿಂದ ಮೂರು ಜಿಲ್ಲೆಯ ರೈತರು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ.


Spread the love

About Laxminews 24x7

Check Also

ಸಾರಿಗೆ ನೌಕರರಿಗೆ ಸಿಹಿ ಸುದ್ದಿ – ಈ ತಿಂಗಳಿನಿಂದಲೇ ಅಕೌಂಟ್‌ಗೆ ಪರಿಷ್ಕೃತ ವೇತನ ಜಮೆ

Spread the loveಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ