ತುಮಕೂರು, ಮೇ 26: ಹೊರಗುತ್ತಿಗೆ ಪದ್ಧತಿಯಲ್ಲೂ ಮೀಸಲಾತಿ (reservation) ತರಲು ಸರ್ಕಾರ ಮುಂದಾಗಿದೆ.
ಆದರೆ ಸರ್ಕಾರದ ನಡೆಗೆ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರಿಂದ ವಿರೋಧ ವ್ಯಕ್ತವಾಗಿದೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ವಿರೋಧ ವ್ಯಕ್ತಪಡಿಸಿರುವ ನೌಕರರು (employees), ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿಯಾದರೆ ಬೀದಿ ಪಾಲಾಗುತ್ತವೆ. ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಕುಟುಂಬಗಳು ಬೀದಿ ಪಾಲಾಗುತ್ತವೆ.
ಯಾವುದೇ ಕಾರಣಕ್ಕೂ ಹೊರಗುತ್ತಿಗೆಯಲ್ಲಿ ಮೀಸಲಾತಿಯನ್ನ ತರಬಾರದು ಎಂದು ಒತ್ತಾಯಿಸಿದ್ದಾರೆ.ಇನ್ನು ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ನೀಡಿರುವ ಹೇಳಿಕೆ ಸರಿಯಲ್ಲ.
ಹೊರಗುತ್ತಿಗೆ ನೌಕರರ ಬಗ್ಗೆ ಲಘುವಾಗಿ ಮಾತನಾಡಿರುವುದಕ್ಕೆ ವಿರೋಧವಿದೆ. ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ 9 ಸಾವಿರಕ್ಕೂ ಹೆಚ್ಚು ನೌಕರರು ಕೆಲಸ ಮಾಡುತ್ತಿದ್ದಾರೆ ಎಂದರು.
Laxmi News 24×7